ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಿಸಿ ಒಬ್ಬ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

cylinder

ಬೆಂಗಳೂರು, ಮೇ 6-ಗ್ಯಾಸ್ ಏಜೆನ್ಸಿಯೊಂದರಲ್ಲಿ ಸಿಲಿಂಡರ್‍ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬಾಪೂಜಿ ಸರ್ಕಲ್ ಬಳಿಯ ಗ್ಯಾಸ್ ಏಜೆನ್ಸಿಯೊಂದರಲ್ಲಿ ಇಂದು ಬೆಳಗ್ಗೆ 10.30ರಲ್ಲಿ ಅನಿಲ ಸೋರಿಕೆಯಿಂದ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟ ವ್ಯಕ್ತಿಯನ್ನು

ಅಫ್ಸರ್ (24) ಎಂದು ಗುರುತಿಸಲಾಗಿದೆ. ಸುಲ್ತಾನಾ(25) ಎಂಬ ಮಹಿಳೆ ಹಾಗೂ ಇವರ ಮಗ ಸೈಯ್ಯದ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಪೂಜಿ ಸರ್ಕಲ್‍ನ ನೆಲಮಹಡಿಯಲ್ಲಿ ಗ್ಯಾಸ್ ಏಜೆನ್ಸಿ ಮತ್ತು ಸೈಕಲ್‍ಶಾಪ್ ಇದ್ದು, ಅದರ ಮೇಲ್ಭಾಗದಲ್ಲಿ ಮನೆ ಇದೆ. ಇಂದು ಬೆಳಗ್ಗೆ ಸಿಲಿಂಡರ್ ಸ್ಫೋಟಕ್ಕೆ ಏಜೆನ್ಸಿಯ ಮೇಲ್ಛಾವಣಿ ಕುಸಿದುಬಿದ್ದಿದ್ದು, ಒಬ್ಬರು ಒಳಗೆ ಸಿಲುಕಿಕೊಂಡಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಲೀಂ ಎಂಬುವರನ್ನು ಹೊರತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಬಗ್ಗೆ ಕಾಡುಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin