ಬೆಂಗಳೂರಲ್ಲಿ 1ಲಕ್ಷ ವಸತಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಫೆ.15 ಕಡೆ ದಿನ

ಈ ಸುದ್ದಿಯನ್ನು ಶೇರ್ ಮಾಡಿ

Dream-Home--01
ಬೆಂಗಳೂರು, ಫೆ.2- ಮುಖ್ಯಮಂತ್ರಿಗಳ ಬೆಂಗಳೂರು ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.15ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರಿಂದ ಆನ್‍ಲೈನ್ ಅರ್ಜಿ ಸಲ್ಲಿಕೆಯ ಅವಧಿಯ ವಿಸ್ತರಣೆ ಮಾಡುವಂತೆ ಸಾಕಷ್ಟು ಮನವಿಗಳು ಬಂದ ಹಿನ್ನೆಲೆಯಲ್ಲಿ ರಾಜೀವ್‍ಗಾಂಧಿ ವಸತಿ ನಿಗಮ ಒಂದು ಲಕ್ಷ ವಸತಿ ಯೋಜನೆಯ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತಿರಿಸಿದ್ದು, ಬೆಂಗಳೂರಿನ ನಾಗರಿಕರು ಅಂತಿಮ ಗಡಿವಿನೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈಗಾಗಲೇ ಜ.5ರಿಂದ ಜ.20ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿತ್ತು. ನಂತರ ಮತ್ತೆ ಜನವರಿ 21ರಿಂದ 31ರವರೆಗೆ ಎರಡು ಬಾರಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದರೂ ಸಲ್ಲಿಕೆಯಾದ ಅರ್ಜಿಗಳು ಮಾತ್ರ 33,500 ಎಂದು ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮದ ಅಧಿಕೃತ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳಾದ ಆದಾಯ ಪ್ರಮಾಣಪತ್ರ, ವಾಸಸ್ಥಳದ ದೃಢೀಕರಣ ಪತ್ರವನು ಪಡೆಯಲು ಅಟಲ್ ಜನಸ್ನೇಹಿ ಕೇಂದ್ರದಿಂದ ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರು ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸುವಂತೆ ಮನವಿ ಮಾಡಿದ್ದರು. ಈಗಾಗಲೇ ಮೂರು ಬಾರಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿರುವುದರಿಂದ ಮತ್ತೆ ವಿಸ್ತರಿಸುವುದಿಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ.

Facebook Comments

Sri Raghav

Admin