ನಾಳೆಯಿಂದ ಬೆಂಗಳೂರಲ್ಲಿ 3 ದಿನಗಳ ಕಾಲ ಪ್ರವಾಸಿ ಭಾರತೀಯ ದಿವಸ್

ಈ ಸುದ್ದಿಯನ್ನು ಶೇರ್ ಮಾಡಿ

Pravasi-Bharateey-Diwas

ಬೆಂಗಳೂರು, ಜ.6– ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ 14ನೆ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನ ನಡೆಯಲಿದೆ.
ಸಮ್ಮೇಳನಕ್ಕೆ ಎಲ್ಲ ರೀತಿಯ ಸಿದ್ಧತೆ ಪೂರ್ಣಗೊಂಡಿದ್ದು, ನಾಳೆ ಬೆಳಗ್ಗೆ 9.30ಕ್ಕೆ ಯುವ ಪ್ರವಾಸಿ ಭಾರತೀಯ ದಿವಸ್ ಆಚರಣೆಯೊಂದಿಗೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ನಾಳಿನ ಕಾರ್ಯಕ್ರಮದಲ್ಲಿ ಕೇಂದ್ರ ಯುವ ಮತ್ತು ಕ್ರೀಡಾ ವ್ಯವಹಾರಗಳ ಸಚಿವ ವಿಜಯ್ ಘೋಯಲ್, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಭಾರತದಲ್ಲಿ ಅನಿವಾಸಿ ಭಾರತೀಯರು ಹಾಗೂ ವಿದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ವಿಚಾರಗೋಷ್ಠಿಗಳು ನಡೆಯಲಿವೆ. ಸಂಜೆ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾನುವಾರ ಪ್ರಧಾನಿ ಪ್ರಧಾನಿ ನರೇಂದ್ರಮೋದಿಯವರು ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದೇಶದಲ್ಲಿ ನೆಲೆಸಿರುವ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದು, ವಿಚಾರಗೋಷ್ಠಿ, ಸಂವಾದ ಗೋಷ್ಠಿಗಳು ನಡೆಯಲಿವೆ.

ಸೋಮವಾರ ಪ್ರವಾಸಿ ಭಾರತೀಯ ದಿವಸ್ ಸಮಾರೋಪಗೊಳ್ಳಲಿದ್ದು, ಇಡೀ ದಿನ ವಿಚಾರಗೋಷ್ಠಿಗಳು ನಡೆಯಲಿವೆ. ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಸುಷ್ಮಾ ಸ್ವರಾಜ್, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin