ಬೆಂಗಳೂರಿನಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ರಷ್ಯಾ ಅಧ್ಯಕ್ಷ ಪುಟೀನ್ ವಿಮಾನ

ಈ ಸುದ್ದಿಯನ್ನು ಶೇರ್ ಮಾಡಿ

Emergency-landing

ಬೆಂಗಳೂರು, ಅ.15- ಗೋವಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ರಷ್ಯಾ ಅಧ್ಯಕ್ಷ ವಾಡ್ಲಿಮೀರ್‍ಪುಟೀನ್ ಅವರಿದ್ದ ವಿಶೇಷ ವಿಮಾನ ಹವಾಮಾನ ವೈಪರಿತ್ಯದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಆಗಿದೆ. ಗೋವಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಪುಟೀನ್ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಆಗಮಿಸುತ್ತಿದ್ದರು. ಹವಾಮಾನ ವೈಫರಿತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಲ್ಯಾಂಡ್ ಮಾಡಲಾಯಿತು.

ಸುಮಾರು 15 ನಿಮಿಷಗಳ ಕಾಲ ಪುಟಿನ್ ಅವರ ವಿಶೇಷ ವಿಮಾನ ಬೆಂಗಳೂರಿನಲ್ಲೇ ಇದ್ದು ಬಳಿಕ ರಷ್ಯಾ ಅಧ್ಯಕ್ಷ ಪುಟೀನ್ ಅವರಿದ್ದ ವಿಮಾನ ಗೋವಾಕ್ಕೆ ತೆರಳಿತು. ಇಂದಿನಿಂದ 2 ದಿನಗಳ ಕಾಲ ವಾರ್ಷಿಕ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ,ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಬ್ರೆಜಿಲ್, ಬಾಂಗ್ಲಾದೇಶ, ಚೀನಾ ಹಾಗೂ ದಕ್ಷಿಣ ಆಫ್ರಿಕಾ ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin