ಬೆಂಗಳೂರಿನಲ್ಲಿ ಮನೆ ಮನೆಗೆ ಹೊರಟ ಕುಮಾರಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--0-0-11

ಬೆಂಗಳೂರು,ಜೂ.1- ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ ಅಂಗವಾಗಿ ಬೆಂಗಳೂರು ಮಹಾನಗರ ಜೆಡಿಎಸ್ ಘಟಕ ಆಯೋಜಿಸಿದ್ದ ಮನೆ ಮನೆಗೆ ಕುಮಾರಣ್ಣ ಎಂಬ ಸಂದೇಶ ಸಾರುವ ಪಾದಯಾತ್ರೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು. ನಗರದ ನಾಡದೇವತೆ ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಇಂದು ಚಾಲನೆ ನೀಡಲಾಗಿದ್ದು, ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ದಿನಗಳ ಕಾಲ ಪಾದಯಾತ್ರೆ ಕೈಗೊಂಡು ಕುಮಾರಸ್ವಾಮಿಯವರು 20 ತಿಂಗಳ ಕಾಲ ಮುಖ್ಯಮಂತ್ರಿಯಾಗಿದ್ದಾಗ ನಡೆಸಿದ ಆಡಳಿತಾವಧಿಯ ಸಾಧನೆ ಮಾಹಿತಿಯನ್ನು ಜನರಿಗೆ ತಲುಪಿಸುವ ಪ್ರಯತ್ನವನ್ನು ಮಾಡಲಿದ್ದಾರೆ.Kumaraswa-my----------01

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ , ಶಾಸಕ ಕೆ.ಗೋಪಾಲಯ್ಯ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಬಿಬಿಎಂಪಿ ಉಪ ಮೇಯರ್ ಆನಂದ್, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin