ಬೆಂಗಳೂರಿನಲ್ಲಿ ಮಳೆ ಸಂತ್ರಸ್ಥರ ನೆರವಿಗೆ ಧಾವಿಸಲು ಮೇಯರ್‍ಗೆ ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Rain--01

ಬೆಂಗಳೂರು, ಮೇ 28-ಮಳೆಯಿಂದ ಜನರಿಗೆ ಯಾವ ಭಾಗದಲ್ಲೂ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ. ತೊಂದರೆಯಾಗಿರುವ ಜನರ ನೆರವಿಗೆ ಧಾವಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕುರುಬ ಸಮುದಾಯದ ಹಾಲು ಮತ ಮಹಾಸಭಾ ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವಾರದಿಂದ ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಭಾಗದಲ್ಲಿ ತೊಂದರೆಯಾಗುತ್ತಿದ್ದು, ಅವರ ನೆರವಿಗೆ ಧಾವಿಸಬೇಕು.ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಮೇಯರ್ ಜಿ.ಪದ್ಮಾವತಿ, ಆಯುಕ್ತರಾದ ಮಂಜುನಾಥ್‍ಪ್ರಸಾದ್ ಅವರಿಗೆ ಆದೇಶ ನೀಡಿದ್ದಾರೆ. ಮಳೆ ಬೀಳುತ್ತಿರುವುದು ಸಂತೋಷದ ವಿಷಯ. ಇದರಿಂದ ಜನರಿಗೆ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಬೇಕಾದುದು ನಮ್ಮ ಕರ್ತವ್ಯ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.  ಮಳೆಯಿಂದ ಅನಾಹುತಗಳ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಜನರಿಗೆ ತೊಂದರೆಯಾಗದಂತೆ ಜಾಗೃತಿ ವಹಿಸಬೇಕು ಎಂದು ಮೇಯರ್ ಹಾಗೂ ಆಯುಕ್ತರಿಗ ಸೂಚನೆ ನೀಡಿದರು.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವಂತೆಯೂ ಕೂಡ ಈ ಸಂದರ್ಭದಲ್ಲಿ ಅವರು ತಿಳಿಸಿದರು.  ಕಳೆದ ಒಂದು ವಾರದಿಂದ ಬೀಳುತ್ತಿರುವ ಭಾರೀ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ದೇವಸ್ಥಾನಗಳು, ಅಪಾರ್ಟ್‍ಮೆಂಟ್‍ಗಳ ಪಾರ್ಕಿಂಗ್ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿತ್ತು. ರಸ್ತೆಯೆಲ್ಲಾ ಜಲಾವೃತಗೊಂಡು ರಾಜಕಾಲುವೆ ತುಂಬಿ ಹರಿದಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾಹುತಗಳು ಹೆಚ್ಚಾಗದಂತೆ ತಡೆಯುವಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಂಜೆ ದೆಹಲಿಗೆ: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಚರ್ಚೆ ನಡೆಸಲು ಪಕ್ಷದ ಹೈಕಮಾಂಡ್ ಆಹ್ವಾನ ನೀಡಿದ್ದು, ತಾವು ಮತ್ತು ಕೆಪಿಸಿಸಿ ಅಧ್ಯಕ್ಷರಾಗಿರುವ ಪರಮೇಶ್ವರ್ ಅವರು ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು, ನಾಳೆ ಹೈಕಮಾಂಡ್ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin