ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಿಸರಿಯನ್ ಹೆರಿಗೆ ಪ್ರಮಾಣ..!

ಈ ಸುದ್ದಿಯನ್ನು ಶೇರ್ ಮಾಡಿ

cesarean-delivery
ಬೆಂಗಳೂರು, ಮಾ.28-
ಕಳೆದ 5 ವರ್ಷಗಳಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ಮೂಲಕ ಆಗುತ್ತಿರುವ ಹೆರಿಗೆ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಇದೊಂದು ಕಳವಳಕಾರಿ ಸಂಗತಿಯಾಗಿದೆ. ಶೇ. 10-12 ರಷ್ಟಿದ್ದ ಶಸ್ತ್ರಚಿಕಿತ್ಸೆ ಹೆರಿಗೆ ಪ್ರಮಾಣ ಕಳೆದ 5 ವರ್ಷಗಳಲ್ಲಿ ಶೇ. 50 ರಿಂದ 60 ಕ್ಕೆ ಹೆಚ್ಚಳವಾಗಿದೆ ಎನ್ನುತ್ತಾರೆ ಪ್ರಸೂತಿ ತಜ್ಞರು. ಇದಕ್ಕೆ ಪ್ರಮುಖ ಕಾರಣ ಗರ್ಭಾವಸ್ಥೆಯಲ್ಲಿ ಕಂಡು ಬರುವ ಸಮಸ್ಯೆಗಳು, ಅಸಮರ್ಪಕವಾದ ಜೀವನಶೈಲಿಯಿಂದ ಬರುವ ಗರ್ಭಿಣಿಯರಲ್ಲಿ ಬೊಜ್ಜು, ಮಧುಮೇಹದಂತಹ ಸಮಸ್ಯೆಗಳಿಂದಾಗಿ ಸಹಜ ಹೆರಿಗೆ ಬದಲಾಗಿ ಶಸ್ತ್ರಚಿಕಿತ್ಸೆ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.

ಶಸ್ತ್ರಚಿಕಿತ್ಸೆ ಎಂಬುದೊಂದು ದಂಧೆ ಆಗಿದೆ ಎಂಬ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮೇನಕಾ ಗಾಂಧಿ ಅವರ ಹೇಳಿಕೆಯನ್ನು ಅಲ್ಲಗಳೆದಿರುವ ಪ್ರಸೂತಿ ತಜ್ಞರು, ಸಹಜ ಹೆರಿಗೆ ಸಂದರ್ಭದಲ್ಲಿ ಎದುರಾಗಬಹುದಾದ ಅಪಾಯಗಳನ್ನು ತಡೆಯುವ ಸಲುವಾಗಿ ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಶಸ್ತ್ರಚಿಕಿತ್ಸೆ(ಸಿಸೇರಿಯನ್)ಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಲೇ ಸೀಸೇರಿಯನ್ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ತಜ್ಞರು ಹೇಳುತ್ತಾರೆ.

ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಹಿರಿಯ ಕನ್ಸಲ್ಟೆಂಟ್ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾಗಿರುವ ಡಾ.ಶುಭಾ ರಾಮರಾವ್ ಅವರು ಹೇಳುವಂತೆ , ಸೀಸೇರಿಯನ್ ಪ್ರಮಾಣದಲ್ಲಿ ಹೆಚ್ಚಳ ಕಂಡುಬರುತ್ತಿರುವುದು ಕಳವಳಕಾರಿ ವಿಚಾರವಾದರೂ, ಇದರಿಂದ ವೈದ್ಯರು ಹಣ ಮಾಡುವ ಉದ್ದೇಶವನ್ನು ಹೊಂದಿಲ್ಲ. ಎಂದು ಹೇಳಿದರು.  ಸ್ತ್ರೀರೋಗ ತಜ್ಞ ಡಾ.ಶ್ಯಾಮಲಾ ಬಾಲಸುಬ್ರಮಣ್ಯನ್ ಮಾತನಾಡಿ, ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿ ಅತ್ಯುತ್ತಮವಾದ ಚಿಕಿತ್ಸಾ ಪದ್ಧತಿ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ. ಇದಾದ ನಂತರ ಅವರು ವೈದ್ಯರ ಸಲಹೆ ಪಡೆದು ಅವರಿಗೆ ಇಷ್ಟವಾದ ಚಿಕಿತ್ಸೆ ಅಥವಾ ಆಯ್ಕೆಯನ್ನು ಮಾಡಿಕೊಳ್ಳುತ್ತಾರೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin