ಬೆಂಗಳೂರಿನಲ್ಲಿ 2 ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಕ್ಕಿ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Train-Suicide

ಬೆಂಗಳೂರು, ಆ.15-ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಕಡೆ ಇಬ್ಬರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

ಯಶವಂತಪುರ ರೈಲ್ವೆ: ಯಲಹಂಕ -ಯಶವಂತಪುರ ರೈಲ್ವೆ ನಿಲ್ದಾಣಗಳ ಮಧ್ಯೆ ಕಾಲುಹಾದಿ ಮೂಲಕ ಇಂದು ಮುಂಜಾನೆ ಹಳಿ ದಾಟುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.ಮೋಹನ್.ಆರ್ ರೈಲಿಗೆ ಸಿಕ್ಕಿ ಮೃತಪಟ್ಟಿರುವ ತಮಿಳುನಾಡು ಮೂಲದ ವ್ಯಕ್ತಿಯೆಂದು ಗುರುತಿಸಲಾಗಿದೆ. ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಡಲಾಗಿದೆ.

ಸಿಟಿ ರೈಲ್ವೆ:
ನಾಯಂಡಹಳ್ಳಿ -ಸಿಟಿ ರೈಲ್ವೆ ಮಧ್ಯೆ ಕಡಪಸ್ವಾಮಿ ಮಠದ ಸಮೀಪ ಕಾರು ಚಾಲಕ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ನಗರದ ನಿವಾಸಿ ಭಾಷಾ (51) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಯಾವುದೋ ರೈಲಿಗೆ ಈತ ಸಿಕ್ಕಿ ಮೃತಪಟ್ಟಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಶವವನ್ನು ಅಂಬೇಡ್ಕರ್ ಆಸ್ಪತ್ರೆಯಲ್ಲಿಡಲಾಗಿದೆ.  ಸಿಟಿ ರೈಲ್ವೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin