ಬೆಂಗಳೂರು : ಮರದ ಕಾರ್ಖಾನೆಗೆ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

Fire

ಬೆಂಗಳೂರು, ಮಾ.30-ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿ ಮರದ ತುಂಡುಗಳು ಸುಟ್ಟು ಭಸ್ಮವಾಗಿರುವ ಘಟನೆ ರಾಜಗೋಪಾಲನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೀಣ್ಯ 2ನೆ ಹಂತದಲ್ಲಿರುವ ಟೀಸ್‍ವುಡ್ ಫ್ಯಾಕ್ಟರಿಯಲ್ಲಿ ತಡರಾತ್ರಿ ಆಕಸ್ಮಿಕ ಬೆಂಕಿ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳ ವಾಹನಗಳು ಆಗಮಿಸಿದ್ದು, 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಬೆಂಕಿಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಗೋಪಾಲನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿ ದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin