ಬೆಂಗಳೂರು-ಮೈಸೂರು ನಡುವೆ ‘ಆಕಾಶ್ ಅಂಬಾರಿ’ ಲಘು ವಿಮಾನ ಸೇವೆಗೆ ನಾಳೆ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

Plane

ಬೆಂಗಳೂರು,ಸೆ.30-ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಮೈಸೂರು ಆಕಾಶ ಅಂಬಾರಿ ಹೆಸರಿನ ಲಘು ವಿಮಾನ ಸೇವೆಯನ್ನು ಒದಗಿಸಲಾಗಿದೆ. ನಗರದ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ನಾಳೆ ಆಕಾಶ್ ಅಂಬಾರಿ ವಿಮಾನ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಈ ವಿಮಾನ ಉದ್ಘಾಟನೆ ಕಾರ್ಯಕ್ರಮವನ್ನು ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದು, ಇದೇ ವಿಮಾನದ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.  ಇದೇ ಮೊದಲ ಬಾರಿಗೆ ಮೈಸೂರು ದಸರಾಕ್ಕೆ ತೆರಳುವ ಪ್ರವಾಸಿಗರ ಅನುಕೂಲಕ್ಕಾಗಿ ಲಘು ವಿಮಾನ ಸೇವೆಯನ್ನು ಒದಗಿಸಲಾಗಿದೆ. ನಾಳೆ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin