ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ-ಕಚೇರಿ ಮೇಲೆ ಎಸಿಬಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ACB

ಬೆಂಗಳೂರು, ಅ.4- ಇಂದು ಬೆಳ್ಳಂಬೆಳಗ್ಗೆ ಎಸಿಬಿ ಪೊಲೀಸರು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಅಧಿಕಾರಿಗಳ ಬೆವರಿಳಿಸಿದ್ದಾರೆ. ಇಂದು ಬೆಳಗ್ಗೆ ಏಕಕಾಲದಲ್ಲಿ ಐವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿ ಕುಮಾರ್‍ವೇಲು, ಬಿಬಿಎಂಪಿ ಡಿ ಗ್ರೂಪ್ ನೌಕರ ಡಿ.ಬಾಬು, ತುಮಕೂರಿನಲ್ಲಿ ಸಮಾಜ ಕಲ್ಯಾಣಾಧಿಕಾರಿ ಸುಬ್ರಹ್ಮಣ್ಯ, ಬೀದರ್‍ನಲ್ಲಿ ಪಂಚಾಯತ್ ರಾಜ್ ಎಂಜಿನಿಯರ್ ಜಗನ್ನಾಥ್, ಚಿತ್ರದುರ್ಗದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮ್ಯಾನೇಜರ್ ಸಿಕಂದರ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಬಿಬಿಎಂಪಿ ಹಿರಿಯ ಆರೋಗ್ಯಾಧಿಕಾರಿ ಕುಮಾರ್‍ವೇಲು ಅವರ ಬಿಳೇಕಲ್ಲಹಳ್ಳಿಯಲ್ಲಿರುವ ಮನೆ ಹಾಗೂ ಕಚೇರಿಯಲ್ಲಿ ಎಸಿಬಿ ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಡಿ ಗ್ರೂಪ್ ನೌಕರ ಬಾಬು ಅವರ ವಿಲಿಯಮ್ಸ್ ಟೌನ್‍ನಲ್ಲಿರುವ ಮನೆ ಹಾಗೂ ಶಿವಾಜಿನಗರದಲ್ಲಿರುವ ಕಚೇರಿಯಲ್ಲಿ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದು ಬಾಬು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ತುಮಕೂರಿನಲ್ಲಿ ಸುಬ್ರಹ್ಮಣ್ಯ ಅವರಿಗೆ ಸೇರಿದ ಹನುಮಂತನಗರ ಹಾಗೂ ಕುವೆಂಪುನಗರದ ಮನೆ ಮೇಲೆ ದಾಳಿ ಮಾಡಿ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಇವರು ಬೇನಾಮಿ ಹೆಸರಿನಲ್ಲಿ 15 ಎಕರೆ ಜಮೀನನ್ನು ಖರೀದಿ ಮಾಡಿರುವುದಲ್ಲದೆ ಮನೆಯಲ್ಲಿ ಅಪಾರ ಹಣ-ಆಭರಣ ಪತ್ತೆಯಾಗಿದೆ.

ಇಂದು ಬೆಳಗ್ಗೆ ಏಕಕಾಲದಲ್ಲಿ ಈ ಎರಡೂ ಮನೆಗಳ ಮೇಲೆ ದಾಳಿ ಮಾಡಿದ ಬೆಂಗಳೂರಿನ ಎಸಿಬಿ ಅಧಿಕಾರಿಗಳು ಸ್ಥಳೀಯ ಎಸಿಬಿ ಅಧಿಕಾರಿಗಳಾದ ಕೋದಂಡರಾಮಯ್ಯ, ಗುರುಪ್ರಸಾದ್ ಅವರೊಂದಿಗೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದರು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin