ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಬಾಡಿ ಬಿಲ್ಡರ್‍ಗಳು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident-Death

ಚನ್ನಪಟ್ಟಣ, ಜು.10-ಅಪರಿಚಿತ ವಾಹನವೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಚ್.ಮೊಗೇನಹಳ್ಳಿ ನಿವಾಸಿಗಳಾದ ಹೇಮಂತ್(24) ಹಾಗೂ ಭರತ್‍ಕುಮಾರ್(19) ಮೃತ ದುರ್ದೈವಿಗಳು. ಚನ್ನಪಟ್ಟಣದಲ್ಲಿ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಕಳೆದ ರಾತ್ರಿ ಸುಮಾರು 10ಗಂಟೆ ಸಂದರ್ಭದಲ್ಲಿ ಈ ಇಬ್ಬರು ಬೈಕ್‍ನಲ್ಲಿ ತೆರಳುವಾಗ ಎದುರಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಡಿಕ್ಕಿ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೇಮಂತ್ ಇತ್ತೀಚೆಗಷ್ಟೇ ಬಿಎ ಪದವಿ ಪೂರೈಸಿದ್ದ, ಭರತ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ. ಇಬ್ಬರೂ ಬಾಡಿಬಿಲ್ಡಿಂಗ್ ಹವ್ಯಾಸದಲ್ಲಿ ತೊಡಗಿಕೊಂಡಿದ್ದರು ಎಂದು ತಿಳಿದು ಬಂದಿದೆ. ಮೇಲ್ನೋಟಕ್ಕೆ ಇದು ಅಪಘಾತವೆಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಅಪಘಾತ ನಡೆದ ಕೋಳಿಫಾರಂನಲ್ಲಿ ಕೆಲಸ ಮಾಡುತ್ತಿದ್ದ ಕೆಲವರನ್ನು ವಿಚಾರಣೆ ನಡೆಸಿದ್ದಾರೆ.

ಗ್ರಾಮದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯುತ್ತಿದ್ದು, ಇದೇ ವೇಳೆ ಈ ದುರಂತ ನಡೆದ ಬಗ್ಗೆ ಮಾಹಿತಿ ತಿಳಿದ ಎಲ್ಲರೂ ದಿಗ್ಭ್ರಾಂತರಾದರು. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಬಿಟ್ಟಿತ್ತು. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin