ಬೈಕ್ ವ್ಹಿಲಿಂಗ್ ಮಾಡಲು ಹೋಗಿ ನಡುರಸ್ತೆಯಲ್ಲೇ ಹೆಣವಾದ

ಈ ಸುದ್ದಿಯನ್ನು ಶೇರ್ ಮಾಡಿ

bike-wheeling
ಬೆಂಗಳೂರು, ಫೆ.21- ಬೈಕ್ ವ್ಹಿಲಿಂಗ್ ಮಾಡುತ್ತಾ ಬರುತ್ತಿದ್ದ ವಿದ್ಯಾರ್ಥಿಯೊಬ್ಬ ಮರಳು ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶೇಷಾದ್ರಿಪುರಂ ಕಾಲೇಜು ಬಳಿ ಇಂದು ಮಧ್ಯಾಹ್ನ ನಡೆದಿದೆ.  ಶೇಷಾದ್ರಿಪುರಂನ ಲಿಂಕ್‍ರೋಡ್‍ನ ನಿವಾಸಿ ದೀಪಕ್ ಮೃತ ವಿದ್ಯಾರ್ಥಿ. ಇಂದು ಮಧ್ಯಾಹ್ನ 12.15ರಲ್ಲಿ ಯಮಹ ಬೈಕ್‍ನಲ್ಲಿ ದೀಪಕ್ ವ್ಹಿಲಿಂಗ್ ಮಾಡಿಕೊಂಡು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಮರಳು ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.  ಈತ ಶೇಷಾದ್ರಿಪುರಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‍ಪೆಕ್ಟರ್ ನವೀನ್‍ಕುಮಾರ್ ಸ್ಥಳ  ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin