ಬೈಕ್ ಸ್ಕಿಡ್ ಆಗಿ ಬಿದ್ದು ಸಿಐಡಿ ಹೆಡ್‍ಕಾನ್‍ಸ್ಟೆಬಲ್ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

accident--bike

ಬೆಂಗಳೂರು, ಆ.20- ಬೈಕ್ ಸ್ಕಿಡ್ ಆಗಿ ಉರುಳಿಬಿದ್ದು ಸಿಐಡಿ ಹೆಡ್‍ಕಾನ್‍ಸ್ಟೆಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಿಐಡಿಯಲ್ಲಿ ಹೆಡ್‍ಕಾನ್‍ಸ್ಟೆಬಲ್ ಆಗಿದ್ದ ಗೋವಿಂದರಾಜು(55) ಮೃತಪಟ್ಟವರು. ನಿನ್ನೆ ರಾತ್ರಿ ಸುಮಾರು 8.30ರಲ್ಲಿ ಕೆಲಸ ಮುಗಿಸಿ ಗೋವಿಂದರಾಜು ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು.

ಹೆಸರುಘಟ್ಟ ಮುಖ್ಯರಸ್ತೆ ಹುರುಳಿಚಿಕ್ಕನಹಳ್ಳಿ ಬಳಿ ಬೈಕ್ ಸ್ಕಿಡ್ ಆಗಿ ಗೋವಿದಂರಾಜು ಕೆಳಕ್ಕೆ ಉರುಳಿದ್ದಾರೆ. ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತ ದೇಹವನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಜಾಲಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin