ಬೋನಿಗೆ ಬಿತ್ತು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ

ಈ ಸುದ್ದಿಯನ್ನು ಶೇರ್ ಮಾಡಿ

Chtaha

ಮೈಸೂರು, ಮಾ.6-ಹಲವು ದಿನಗಳಿಂದ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ ಮೈಸೂರು ತಾಲೂಕಿನ ಆಯರಳ್ಳಿ ಬಳಿ ಬೋನಿಗೆ ಬಿದ್ದಿದೆ. ಆಯರಳ್ಳಿ ಗ್ರಾಮದ ಜವನಪ್ಪ ಎಂಬುವರ ತೋಟದಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ದಿನಗಳಿಂದ ಈ ಗ್ರಾಮದಲ್ಲಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಈ ಚಿರತೆ ಆತಂಕ ಸೃಷ್ಟಿಸಿತ್ತು. ಅರಣ್ಯ ಇಲಾಖೆಗೆ ಹಲವು ದಿನಗಳಿಂದ ಪೊಲೀಸರು ಮನವಿ ಮಾಡಿದ ಹಿನ್ನೆಲೆಯಲ್ಲಿ ಚಿರತೆ ಹಿಡಿಯಲು ಬೋನಿಟ್ಟಿದ್ದರು. ನಿನ್ನೆ ಚಿರತೆ ಆಯರಳ್ಳಿಯಲ್ಲಿ ಬೋನಿಗೆ ಬಿದ್ದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin