ಬ್ಯಾಂಕ್‍’ನ ಅಸಿಸ್ಟೆಂಟ್ ಮ್ಯಾನೇಜರ್ ನೇಣಿಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

Hang-Suicide--01

ಮೈಸೂರು,ಏ.8- ಬ್ಯಾಂಕ್‍ವೊಂದರ ಅಸಿಸ್ಟೆಂಟ್ ಮ್ಯಾನೇಜರ್‍ರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿಯ ಶರತ್ ಕಲಪನವರ (25) ಆತ್ಮಹತ್ಯೆ ಮಾಡಿಕೊಂಡಿರುವ ಅಸಿಸ್ಟೆಂಟ್ ಮ್ಯಾನೇಜರ್. ನಗರದ ಕರೂರು ವೈಶ್ಯ ಬ್ಯಾಂಕ್‍ನಲ್ಲಿ ಇವರು ಅಸಿಸ್ಟೆಂಟ್ ಮ್ಯಾನೇಜರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ 6 ತಿಂಗಳ ಹಿಂದೆಯಷ್ಟೆ ಬೆಳಗಾವಿಯಿಂದ ನಗರಕ್ಕೆ ವರ್ಗಾವಣೆಗೊಂಡು ಬಂದಿದ್ದರು.

ನಗರದ ಗನ್‍ಹೌಸ್ ಬಳಿ ಸ್ನೇಹಿತರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೊಠಡಿಯಲ್ಲೇ ಫ್ಯಾನ್‍ಗೆ ನೇಣುಬಿಗಿದುಕೊಂಡು ಶರತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಈ ವಿಷಯ ತಿಳಿದು ಬಂದಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ನಾನೇ ಕಾರಣ, ಕ್ಷಮಿಸಿ ಅಣ್ಣ ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಕೆ.ಆರ್.ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin