ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ

ಈ ಸುದ್ದಿಯನ್ನು ಶೇರ್ ಮಾಡಿ

ACB

ಕಾರವಾರ, ಡಿ.29- ಹೊಸದಾಗಿ ನಿರ್ಮಿಸಿದ ಕಟ್ಟಡಕ್ಕೆ ನೀರಿನ ಸಂಪರ್ಕ ಕಲ್ಪಿಸಲು ಲಂಚ ಪಡೆಯುತ್ತಿದ್ದ ಭಟ್ಕಳದ ಪುರಸಭೆಯ ಮುಖ್ಯಾಧಿಕಾರಿಯೊಬ್ಬರನ್ನು ಭ್ರಷ್ಟಾಚರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ಪುರಸಭೆ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸುತ್ತಿದ್ದ ವಸತಿ ಕಟ್ಟಡಕ್ಕೆ ನೀರಿನ ಸೌಲಭ್ಯ ಒದಗಿಸುವಂತೆ ಕಾರ್ಪೆಂಟಿಂಗ್ ಮತ್ತು ಪ್ಲಬಿಂಗ್ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರರು ಮನವಿ ಮಾಡಿದ್ದರು. ಆದರೆ, ಈ ಸೌಲಭ್ಯ ಒದಗಿಸಲು ಪುರಸಭೆ ಮುಖ್ಯಾಧಿಕಾರಿಯಾಗಿದ್ದ ಕರ್ನಾಟಕ ಮುನ್ಸಿಪಲ್ ಅಡ್ಮಿನಿಸ್ಟ್ರೇಟಿವ್ ಸರ್ವೀಸ್‍ನ ಅಧಿಕಾರಿ ಎಂ.ಜಿ.ರಮೇಶ್ ಅವರು 4ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮನವಿದಾರರು ದೂರನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಡಿ.28ರಂದು ಲಂಚ ಪಡೆಯುತ್ತಿದ್ದ ರಮೇಶ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Facebook Comments

Sri Raghav

Admin