ಭಯೋತ್ಪಾದಕರ ಮಟ್ಟ ಹಾಕಿ : ಪಾಕ್‍ಗೆ ಅಮೆರಿಕ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

USA

ವಾಷಿಂಗ್ಟನ್, ಸೆ.30- ಕಾಶ್ಮೀರದ ಉರಿಯಲ್ಲಿನ ಭಾರತೀಯ ಸೇನಾ ಶಿಬಿರದ ಮೇಲೆ ನಡೆದ ಭಯೋತ್ಪಾದಕರ ದಾಳಿಯಿಂದ ತೀವ್ರ ಉದ್ವಿಗ್ನ ಸ್ಥಿತಿಗೆ ಕಾರಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ಅಮೆರಿಕ, ವಿಶ್ವಸಂಸ್ಥೆ ಸೂಚಿಸಿರುವ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ತಾಕೀತು ಮಾಡಿದೆ. ಉಗ್ರಗಾಮಿ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡು ಅವುಗಳನ್ನು ನಿರ್ನಾಮ ಮಾಡಿ ಎಂದು ವಿದೇಶಾಂಗ ಇಲಾಖೆ ಸೂಚನೆ ನೀಡಿದೆ ಎಂದು ವಕ್ತಾರೆ ಜಾನ್ ಕಿರ್ಬಿ ವಾಷಿಂಗ್ಟನ್‍ನಲ್ಲಿ ಇಂದು ತಿಳಿಸಿದ್ದಾರೆ. ಏತನ್ಮಧ್ಯೆ ವಾಷಿಂಗ್ಟನ್‍ನಲ್ಲಿ ದಿನನಿತ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೋಶ್ ಅರ್ನೆಸ್ಟ್, ವಿಶ್ವಸಂಸ್ಥೆ ತಿಳಿಸಿರುವ ಭಯೋತ್ಪಾದನೆ ಸಂಘಟನೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವಂತೆ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿದರು.

► Follow us on –  Facebook / Twitter  / Google+

Facebook Comments

Sri Raghav

Admin