ಭಾರತದಲ್ಲಿ 5 ವರ್ಷದೊಳಗಿನ ಶೇ.58ರಷ್ಟು ಮಕ್ಕಳಲ್ಲಿ ರಕ್ತ ಹೀನತೆ

ಈ ಸುದ್ದಿಯನ್ನು ಶೇರ್ ಮಾಡಿ

Animia--014

ನವದೆಹಲಿ, ಮಾ.6-ಭಾರತದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯೋಮಾನದ ಶೇ.58ರಷ್ಟು ಮಕ್ಕಳು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂಬ ಆತಂಕಕಾರಿ ಸಂಗತಿಯೊಂದು ಬಹಿರಂಗಗೊಂಡಿದೆ. ದೇಶದ ಮಕ್ಕಳನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯ ಮೇಲೆ ಸಮೀಕ್ಷೆಯೊಂದು ಬೆಳಕು ಚೆಲ್ಲಿದೆ. ದೇಶದ ಶೇ.50ಕ್ಕಿಂತ ಹೆಚ್ಚು ಮಕ್ಕಳಲ್ಲಿ ಹಿಮೋಗ್ಲೊಬಿನ್ ಕೊರತೆ ಕಂಡುಬರುತ್ತಿದೆ. ಇದರಿಂದಾಗಿ ಚಿಕ್ಕ ವಯಸ್ಸಿನಲ್ಲೇ ಅನಿಮಿಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಕ್ತಹೀನತೆ ಕಾರಣದಿಂದ ಚಿಣ್ಣರು ಬಹುಬೇಗ ಆಯಾಸಕ್ಕೆ ಒಳಗಾಗುತ್ತಾರೆ ಎಂದು ಇತ್ತೀಚೆಗೆ ಬಿಡುಗಡೆ ಮಾಡಲಾದ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ (ಎನ್‍ಎಫ್‍ಎಚ್‍ಎಸ್-4) ತಿಳಿಸಲಾಗಿದೆ.

ರಕ್ತಹೀನತೆಯಿಂದ ನರಳುವ ಮಕ್ಕಳು ರೋಗ ಪ್ರತಿರೋಧಕ ಶಕ್ತಿಯನ್ನು ಕಳದುಕೊಂಡು ಸೋಂಕುಗಳಿಗೆ ಸುಲಭವಾಗಿ ಒಳಗಾಗುತ್ತಾರೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಯೂ ಕುಂಠಿತಗೊಳ್ಳುತ್ತದೆ ಎಂದು ಸಮೀಕ್ಷೆಯಲ್ಲಿ ವಿವರಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin