ಭಾರತದ ರಕ್ಷಣಾ ಇಲಾಖೆ ದಾಖಲೆ ಹೊಂದಿದ್ದ ಪಾಕ್ ಹೈಕಮೀಷನರ್ ಕಾರ್ಯಾಲಯದ ಅಧಿಕಾರಿಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Pak-Office

ನವದೆಹಲಿ,ಅ.27-ಭಾರತದ ರಕ್ಷಣಾ ಇಲಾಖೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಹೊಂದಿದ್ದ ಆರೋಪದ ಮೇಲೆ ರಾಜಧಾನಿಯಲ್ಲಿರುವ ಪಾಕಿಸ್ತಾನ ಹೈಕಮೀಷನರ್ ಕಚೇರಿಯ ಉನ್ನತ ಅಧಿಕಾರಿ ಸೇರಿದಂತೆ ನಾಲ್ವರನ್ನು ದೆಹಲಿ ಅಪರಾಧ ತನಿಖಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ದೇಶದ ರಕ್ಷಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ  ಬೇಹುಗಾರಿಕೆ ಚಟುವಟಿಕೆಗಳು ನಡೆಯುತ್ತಿರುವ ಆತಂಕದ ನಡುವೆಯೇ ಈ ಬೆಳವಣಿಗೆ ಕಂಡುಬಂದಿದೆ. ದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮೀಷನರ್ ಅಬ್ದುಲ್ ಬಸಿತ್ ಅವರ ಕಚೇರಿಯ ಹಿರಿಯ ಅಧಿಕಾರಿ ಮೊಹಮ್ಮದ್ ಅಖ್ತರ್ ಮತ್ತು ಇತರ  ನಾಲ್ವರನ್ನು , ದೇಶದ ರಕ್ಷಣೆಗೆ ಸಂಬಂಧಿಸಿದ ದಾಖಲೆಗಳನ್ನು ಅಕ್ರಮವಾಗಿ ಹೊಂದಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಈ ಸಂಬಂಧ ಹೈಕಮೀಷನರ್‍ಗೆ ವಿವರ ಕೋರಿ ಸಮನ್ಸ್ ಜಾರಿಗೊಳಿಸಲಾಗಿದೆ.

ಹೈಕಮೀಷನರ್ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂಧಿಸಿದ ವಿಷಯವನ್ನು ವಿದೇಶಾಂಗ ಸಚಿವಾಲಯ ಮತ್ತು ಗೃಹಸಚಿವ ರಾಜನಾಥ್ ಸಿಂಗ್ ಅವರ ಗಮನಕ್ಕೆ ತರಲಾಗಿದೆ. ಬಂಧಿತರನ್ನು ವಿಚಾರಣೆಗೊಳಪಡಿಸಿ ರಾಜತಾಂತ್ರಿಕ ನೀತಿ ಕಾನೂನಿನ ಅನ್ವಯ ಬಿಡುಗಡೆಗೊಳಿಸಲಾಗಿದೆ. ಈ ಬಗ್ಗೆ ಪಾಕಿಸ್ತಾನ ಹೈಕಮೀಷನರ್ ಬಸಿತ್ ಅವರ ವಿವರಣೆಗಳನ್ನು ನಿರೀಕ್ಷಿಸಲಾಗುತ್ತಿದೆ.

► Follow us on –  Facebook / Twitter  / Google+

 

 

Facebook Comments

Sri Raghav

Admin