ಭಾರತವೇ ಕದನ ವಿರಾಮ ಉಲ್ಲಂಘಿಸಿದೆ ಎಂದು ವಿಶ್ವಸಂಸ್ಥೆಗೆ ದೂರಿದ ಪಾಕಿಸ್ತಾನ

ಈ ಸುದ್ದಿಯನ್ನು ಶೇರ್ ಮಾಡಿ

Pakistan-002

ಇಸ್ಲಾಮಾಬಾದ್, ನ.21– ಅಂತಾರಾಷ್ಟ್ರೀಯ ಗಡಿ (ಐಬಿ) ಮತ್ತು ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಭಾರತದಿಂದ ಕದನ ವಿರಾಮ ಉಲ್ಲಂಘನೆಗಳಾಗುತ್ತಿವೆ ಎಂದು ಆರೋಪಿಸಿ ಪಾಕಿಸ್ತಾನವು ವಿಶ್ವಸಂಸ್ಥೆಯ ಸೇನಾ ವೀಕ್ಷಣಾ ಸಮೂಹಕ್ಕೆ ದೂರು ನೀಡಿದೆ. ರಾವಲ್ಪಿಂಡಿಯಲ್ಲಿ ನಿನ್ನೆ ಭಾರತ ಮತ್ತು ಪಾಕಿಸ್ತಾನದಲ್ಲಿನ ವಿಶ್ವಸಂಸ್ಥೆಯ ಸೇನಾ ವೀಕ್ಷಕರ ಸಮೂಹದ (ಯುಎನ್‍ಎಂಒಜಿಐಪಿ) ಪ್ರತಿನಿಧಿಗಳು ಪಾಕಿಸ್ತಾನದ ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಭಾರತವು ಗಡಿ ಭಾಗದಲ್ಲಿ ನಿರಂತರವಾಗಿ ಕದನ ವಿರಾಮಗಳನ್ನು ಉಲ್ಲಂಘಿಸುತ್ತಿದೆ ಎಂದು ಈ ಸಂದರ್ಭದಲ್ಲಿ ಪಾಕಿಸ್ತಾನ ಅಧಿಕಾರಿಗಳು ದೂರಗಳ ಕಡತವನ್ನು ಪ್ರತಿನಿಧಿಗಳಿಗೆ ನೀಡಿದ್ದಾರೆ ಎಂದು ಪಾಕಿಸ್ತಾನದ ವಿದೇಶಾಂಕ ಕಚೇರಿ ತಿಳಿಸಿದೆ.

ಗಡಿ ನಿಯಂತ್ರಣ ರೇಖೆಯ ಖುಯಿರಾಟ ಸೆಕ್ಟರ್‍ನಲ್ಲಿ ಭಾರತೀಯ ಪಡೆಗಳ ಅಪ್ರಚೋದಿತ ಗುಂಡಿನ ದಾಳಿಯಿಂದ ಮೂವರು ಮಕ್ಕಳೂ ಸೇರಿದಂತೆ ನಾಲ್ವರು ಮೃತಪಟ್ಟ ಹಿನ್ನೆಲೆಯಲ್ಲಿ ಪ್ರತಿನಿಧಿಗಳಿಗೆ ವಿವರವಾದ ದೂರಗಳ ಕಡತವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin