ಭಾರಿ ಮಳೆಗೆ ಕುಂದಾಪುರ ಮತ್ತೆ ಕುಸಿದ ಗುಡ್ಡ, ರಾಷ್ಟ್ರೀಯ ಹೆದ್ದಾರಿ 66 ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

Kundapur--001

ಬೆಂಗಳೂರು,ಜೂ.11-ಕರಾವಳಿ ಕಡಲ ತೀರ ಪ್ರದೇಶಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒತ್ತಿನೆಣೆ ಗ್ರಾಮ ಸಮೀಪ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ಈ ಹಿನ್ನಲೆಯಲ್ಲಿ ಸುಮಾರು 3 ಕಿಮೀ ಉದ್ದಕ್ಕೆ ವಾಹನಗಳು ರಸ್ತೆಯಲ್ಲಿ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು. ಈ ಸಂದರ್ಭ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪರ್ಯಾಯ ರಸ್ತೆ ನಿರ್ಮಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.

3 ಬುಲ್ಡೋಜರ್‍ಗಳ ಮೂಲಕ ರಸ್ತೆಯಲ್ಲಿ ಬಿದ್ದಿದ್ದ ಭಾರೀ ಪ್ರಮಾಣದ ಮಣ್ಣನ್ನು ತೆರವಿಗೊಳಿಸಲಾಯಿತು.ಕಳೆದ ವಾರ ಕೂಡ ಮಳೆಗೆ ಈ ಪ್ರದೇಶದಲ್ಲಿ ಗುಡ್ಡ ಕುಸಿದಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin