ಭಾರಿ ಮಳೆಗೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಹೋದ ಯುವಕ

ಈ ಸುದ್ದಿಯನ್ನು ಶೇರ್ ಮಾಡಿ

banga-1

ಬಂಗಾರಪೇಟೆ, ನ.18- ನಿನ್ನೆ ಸಂಜೆ ಇದ್ದಕ್ಕಿದ್ದಂತೆ ಭಾರೀ ಮಳೆಯಿಂದಾಗಿ ತಾಲ್ಲೂಕಿನ ಬಲಮಂದೆ ಗ್ರಾಮದ ಕೆರೆ ಕೋಡಿ ಒಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಕಾಮಸಂದ್ರ ಗ್ರಾಮದ ನಿವಾಸಿ ಸುರೇಶ್ (32) ನೀರಿನಲ್ಲಿ ಕೊಚ್ಚಿ ಹೋದ ಯುವಕ.

ಈತ ನಿನ್ನೆ ಸಂಜೆ ಗ್ರಾಮಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸಂಜೆಯಿಂದ ಸುರಿದ ಮಳೆಯಿಂದ ಕೆರೆ ಕೋಡಿಯಲ್ಲಿ ನೀರು ಹರಿಯುತ್ತಿತ್ತು. ಅದರಲ್ಲೇ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ. ನೀರಿನ ರಭಸಕ್ಕೆ ಆತನ ದೇಹ ಮತ್ತು ಬೈಕ್ ಕೊಚ್ಚಿ ಹೋಗಿದೆ. ರಾತ್ರಿ ಇಡೀ ಪೊಷಕರು ಗ್ರಾಮದ ಸುತ್ತ ಹುಡುಕಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಹಳ್ಳದ ಗಿಡದ ಪೇದೆಯೊಂದಕ್ಕೆ ಮೃತ ದೇಹ ಸಿಕ್ಕಿ ಕೊಂಡಿದ್ದು , ಗ್ರಾಮಸ್ಥರು ಕಾಮಸಂದ್ರ ಠಾಣೆಗೆ ಸುದ್ದಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಹೊರ ತೆಗೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin