ಭಾರೀ ಮಳೆ : ಕುಂದಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ, ಸಂಚಾರ ಅಸ್ತವ್ಯಸ್ತ

ಈ ಸುದ್ದಿಯನ್ನು ಶೇರ್ ಮಾಡಿ

Udupi

ಉಡುಪಿ, ಜೂ.7- ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕುಂದಾಪುರ ತಾಲ್ಲೂಕಿನ ಬೈಂದೂರು ವತ್ತೀನೆಣೆ ಬಳಿ ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ವಾಹನ ಸಂಚಾರ ಬಂದ್ ಆಗಿದೆ.  ಕಳೆದ ರಾತ್ರಿ ರಸ್ತೆ ಮೇಲೆ ಮಣ್ಣು ಕುಸಿದು ಬಿದ್ದಿದ್ದರಿಂದ ಈ ಭಾಗದಲ್ಲಿ ಸಾಗುತ್ತಿದ್ದರಿಂದ ನೂರಾರು ವಾಹನಗಳಿಗೆ ತಡೆಯಾಗಿದ್ದು, ಇಂದು ಮಧ್ಯಾಹ್ನದವರೆಗೂ ನಿಂತಲ್ಲೇ ನಿಂತಿವೆ.
ಇದರಿಂದ ಸುಮಾರು ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಿಬ್ಬಂದಿಗಳು ಜೆಸಿಬಿಗಳನ್ನು ಬಳಸಿ ಮಣ್ಣನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin