ಭಿನ್ನಾಭಿಪ್ರಾಯಗಳ ಶಮನಕ್ಕೆ ಭಾರತ-ಚೀನಾ ಮಾತುಕತೆ

ಈ ಸುದ್ದಿಯನ್ನು ಶೇರ್ ಮಾಡಿ

India--China--01

ಬೀಜಿಂಗ್, ಫೆ.22-ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಿ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆಗೆ ಹೆಚ್ಚಿನ ಮಹತ್ವ ನೀಡಲು ಭಾರತ ಮತ್ತು ಚೀನಾ ಮಹತ್ವದ ಮಾತುಕತೆ ನಡೆಸಿವೆ.
ಜೈಷ್-ಎ-ಮಹಮದ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಮೇಲೆ ವಿಶ್ವಸಂಸ್ಥೆ ನಿಷೇಧ ವಿಧಿಸಲು ಹಾಗೂ ಭಾರತದ ಪರಮಾಣು ಪೂರೈಕೆ ಸಮೂಹ (ಎನ್‍ಎಸ್‍ಜಿ) ಸೇರ್ಪಡೆಗೆ ಚೀನಾ ಅಡ್ಡಗಾಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಉಭಯ ದೇಶಗಳ ಈ ಮಾತುಕತೆ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ.   ಚರ್ಚೆಗೂ ಮುನ್ನ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಚೀನಿ ವಿದೇಶಾಂಗ ಸಚಿವ ವಾಂಗ್ ಯೀ ಅವರೊಂದಿಗೆ ಮಾತುಕತೆ ನಡೆಸಿದರು.

ಚೀನಾ ಮತ್ತು ಭಾರತವು ಏಷ್ಯಾದ ಅಭಿವೃದ್ದಿ ಹೊಂದುತ್ತಿರುವ ಎರಡು ಪ್ರಮುಖ ದೇಶಗಳಾಗಿವೆ. ವಿಶ್ವದಲ್ಲಿ ಶಕ್ತಿಶಾಲಿ ರಾಷ್ಟ್ರಗಳಾಗಿ ಗುರುತಿಸಿಕೊಂಡಿದ್ದು, ಮಾರುಕಟ್ಟೆ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿವೆ. ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ನಿಟ್ಟಿನಲ್ಲಿ ನಾನು ಆಗಾಗ ಸಭೆಗಳನ್ನು ನಡೆಸಬೇಕಿದೆ. ಉಭಯ ದೇಶಗಳ ನಡುವೆ ಉನ್ನತ ಮಟ್ಟದ ಮಾತುಕತೆಗಳು ಮುಂದುವರಿದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ವಾಂಗ್ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin