ಭೀಕರ ಬರ , ಮೇವು, ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ : ದೇಶಪಾಂಡೆ

ಈ ಸುದ್ದಿಯನ್ನು ಶೇರ್ ಮಾಡಿ

RV-Deshapandey

ಬಾಗಲಕೋಟೆ, ಮೇ 12- ರಾಜ್ಯದಲ್ಲಿ ಭೀಕರ ಬರ ಎದುರಾಗಿದ್ದು, ಬರ ನಿರ್ವಹಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಜಾನುವಾರುಗಳಿಗೆ ಮೇವು, ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಬೀಳಗಿ ತಾಲ್ಲೂಕಿನ ಗಿರಿಸಾಗರ ಗ್ರಾಮದಲ್ಲಿ ಬರ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಭೀಕರ ಬರಗಾಲ ಇದೆ. ಸರ್ಕಾರ ಎಲ್ಲಾ ಜಿಲ್ಲೆಗಳಲ್ಲೂ ಬರ ನಿರ್ವಹಣೆ ಮಾಡುತ್ತಿದೆ. ದನಕರುಗಳು, ಪಕ್ಷಿಗಳಿಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಿದೆ ಎಂದರು.ಬರಗಾಲ ನಿರ್ವಹಣೆಗೆ ಸರ್ಕಾರದಲ್ಲಿ ಹಣದ ಕೊರತೆ ಎದುರಾಗಿಲ್ಲ. ಮೊದಲು ಜನರಿಗೆ, ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದು ಅತಿ ಮುಖ್ಯವಾದ ಕೆಲಸ. ಹಾಗೆಯೇ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಉದ್ಯೋಗ ಕೊಡುವುದೂ ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ 14.80 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಶಾಸಕರು ಮುತುವರ್ಜಿ ವಹಿಸಿ ಹಣವನ್ನು ಬರಪರಿಹಾರಕ್ಕೆ ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಉತ್ತರ ಕರ್ನಾಟಕಕ್ಕೆ ಕೆಪಸಿಸಿ ಅಧ್ಯಕ್ಷ ಸ್ಥಾನ:

ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಬೇಕೆಂದು ಒತ್ತಾಯಿಸುವುದರಲ್ಲಿ ತಪ್ಪೇನಿಲ್ಲ. ಈ ಭಾಗದವರಿಗೆ ಪ್ರಾಧಾನ್ಯತೆ ಕೊಡಬೇಕೆಂದು ಇದೇ ವೇಳೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ದೇಶಪಾಂಡೆ ಉತ್ತರಿಸಿದರು.  ಈಗಾಗಲೇ ನೂತನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಎಲ್ಲಾ ನಾಯಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ವೇಣುಗೋಪಾಲ್ ಹೈಕಮಾಂಡ್‍ಗೆ ರಾಜ್ಯ ನಾಯಕರನ್ನು ತಿಳಿಸಲಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು ಸಚಿವರು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin