ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆಯುವಂತೆ ಕಮಲ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Kamal-Hassna--01

ಚೆನ್ನೈ, ಜು.20- ತಮಿಳುನಾಡು ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅರೋಪಿಸಿ ಮುಖ್ಯಮಂತ್ರಿ ಕೆ.ಪಳಿನಿಸ್ವಾಮಿ ಮತ್ತು ಸಚಿವರ ಕೆಂಗಣ್ಣಿಗೆ ಗುರಿಯಾಗಿರುವ ಖ್ಯಾತ ಚಿತ್ರನಟ ಕಮಲ್ ಹಾಸನ್ ಇಂದು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ, ಇಂಥ ಭ್ರಷ್ಟಾಚಾರ ಪ್ರಕರಣಗಳನ್ನು ಡಿಜಿಟಲ್ ಮೂಲಕ ಸರ್ಕಾರದ ಗಮನಕ್ಕೆ ತರುವಂತೆಯೂ ಸಾರ್ವಜನಿಕರನ್ನು ಪ್ರೇರೇಪಿಸಿದ್ದಾರೆ.  ತಾವು ರಾಜಕೀಯ ಸೇರುವ ಇಂಗಿತ ವ್ಯಕ್ತಪಡಿಸುವ ಮೂಲಕ ಸಿನಿಮಾ ಮತ್ತು ರಾಜಕೀಯ ರಂಗಗಳಲ್ಲಿ ಸಂಚಲನ ಸೃಷ್ಟಿಸಿರುವ ಕಮಲ್, ನಿನ್ನೆ ರಾತ್ರಿ ಸುದ್ದಿಗಾರ ರೊಂದಿಗೆ ಮತ್ತೆ ಭ್ರಷ್ಟಾಚಾರ ಕುರಿತು ಮಾತನಾಡಿದರು.

ಆಡಳಿತಾರೂಢ ಎಐಎಡಿಎಂಕೆ (ಅಮ್ಮಾ ಬಣ) ಸರ್ಕಾರದಲ್ಲಿ ಭ್ರಷ್ಟಾಚಾರ ಮತ್ತು ಲಂಚಾವತಾರ ತಾಂಡವವಾಡುತ್ತಿದೆ. ಈ ಸಂಗತಿ ಇಡೀ ರಾಜ್ಯಕ್ಕೇ ತಿಳಿದಿದೆ. ಈ ಬಗ್ಗೆ ವಿವಿಧ ಮಾಧ್ಯಮಗಳಲ್ಲೂ ವರದಿಯಾಗಿದೆ ಎಂದು ಅವರು ಪ್ರತಿಕ್ರಿಯಿಸಿದರು.  ಬಲವಂತದ ಹಿಂದಿ ಹೇರಿಕೆ ವಿರುದ್ಧ ನಾನು ಈ ಹಿಂದೆಯೇ ಧನಿ ಎತ್ತಿ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಆ ದಿನದಿಂದಲೇ ನಾನು ಹವ್ಯಾಸಿ ರಾಜಕಾರಣಿಯಾಗಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin