ಮಂಗಳೂರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 800 ಟ್ರಕ್ ಮರಳು ವಶ

ಈ ಸುದ್ದಿಯನ್ನು ಶೇರ್ ಮಾಡಿ

Sand-Import--01
ಮಂಗಳೂರು, ಜ.16-ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳಲ್ಲಿ ಅಕ್ರಮ ಮರಳು ಸಾಗಣೆ ದಂಧೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಜಿಲ್ಲಾಡಳಿತ ಕಳೆದ ಎರಡು ದಿನಗಳ ಅವಧಿಯಲ್ಲಿ 800ಕ್ಕೂ ಹೆಚ್ಚು ಟ್ರಕ್ ಲೋಡ್ ಮರಳು, ಒಂದು ಯಂತ್ರ ಮತ್ತು ಹಲವಾರು ಲಾರಿಗಳನ್ನು ವಶಪಡಿಸಿಕೊಂಡಿದೆ. ಮಂಗಳೂರು ತಾಲ್ಲೂಕಿನ ಮರವೂರು ಡ್ಯಾಂ ಬಳಿ ಇದ್ದ ಐದು ಮರಳು ತೆಗೆಯುವ ಘಟಕಗಳನ್ನು ಪತ್ತೆ ಮಾಡಲಾಗಿದ್ದು, ಅವುಗಳಿಗೆ ಬೀಗ ಜಡಿಯಲಾಗಿದೆ.

ಅಲ್ಲದೇ ಮರಳು ಕಳ್ಳಸಾಗಣೆಗೆ ಬಳಸುತ್ತಿದ್ದ 40 ದೋಣಿಗಳನ್ನು ಬಂಧಿಸಲಾಗಿದ್ದು, ಆರು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಉಪ ಪೊಲೀಸ್ ಆಯುಕ್ತ ಶಶಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಜನವರಿ 13ರಿಂದ ನಿನ್ನೆ ಸಂಜೆಯವರೆಗೆ ಈ ಕಾರ್ಯಾಚರಣೆ ನಡೆಸಲಾಯಿತು. ಕರಾವಳಿ ನಿಬಂಧನೆ ವಲಯದ ವ್ಯಾಪ್ತಿಯಲ್ಲಿ ಮರಳು ಸಾಗಣೆ ದಂಧೆಯ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin