ಮಂಗಳೂರು ಜೈಲಿನಲ್ಲಿ ಕೈದಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-Jai

ಮಂಗಳೂರು, ಸೆ.7- ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಕೇಶವಗೌಡ (28) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುಳ್ಯದಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎಂದು ಹೇಳಲಾಗಿದೆ.  ಇಂದು ಬೆಳಗ್ಗೆ ಈತ ಕಾರಾಗೃಹದಲ್ಲಿ ಟವೆಲ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಜೈಲು ಸಿಬ್ಬಂದಿ ತಕ್ಷಣ ಈತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

► Follow us on –  Facebook / Twitter  / Google+

Facebook Comments

Sri Raghav

Admin