ಮಂಡ್ಯದಲ್ಲಿ ನಾಳೆ ಇಂದಿರಾ ಕ್ಯಾಂಟಿನ್, ಎಳನೀರು ಮಾರ್ಕೆಟ್ ನಾಳೆ ಲೋಕಾರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

Indira-Canteen
ಮಂಡ್ಯ, ಮಾ.1- ನಗರದಲ್ಲಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನ, ಒಳಾಂಗಣ ಕ್ರೀಡಾಂಗಣ, ಇಂದಿರಾ ಕ್ಯಾಂಟಿನ್ ಮತ್ತು ಸುಂಡಹಳ್ಳಿ ಬಳಿ ಇರುವ ಎಪಿಎಂಸಿ ಎಳನೀರು ಮಾರುಕಟ್ಟೆ ಲೋಕಾರ್ಪಣೆ ಕಾರ್ಯಕ್ರಮ ನಾಳೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ.ಗಂಗಾಧರ್ ತಿಳಿಸಿದ್ದಾರೆ.

ಮಂಡ್ಯ ತಾಲೂಕಿನ ಸುಂಡಹಳ್ಳಿ ಗ್ರಾಮದ ಬಳಿ ನಿರ್ಮಾಣಗೊಂಡಿರುವ ಎಳನೀರು ಮಾರುಕಟ್ಟೆ ಉದ್ಘಾಟನೆ, ಬಾಲಕಿಯರ ವೃತ್ತಿಪರ ಕಾಲೇಜು ಆಯುರ್ವೇದ ಕೇಂದ್ರ, ಬಾಬು ಜಗಜೀವನ್‍ರಾಮ್ ಭವನ ಹಾಗೂ ವಿದ್ಯುತ್ ಪ್ರಸರಣ ಘಟಕಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕ ಅಂಬರೀಶ್ ವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸೇರಿದಂತೆ ಹಲವಾರು ಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Facebook Comments

Sri Raghav

Admin