ಮಂಡ್ಯ ಜಿಲ್ಲೆಯಾದ್ಯಂತ ಇನ್ನೂ ಎರಡು ದಿನ ಶಾಲಾ-ಕಾಲೇಜಿಗೆ ರಜೆ

ಈ ಸುದ್ದಿಯನ್ನು ಶೇರ್ ಮಾಡಿ

Mandya-a

ಬೆಂಗಳೂರು, ಸೆ.6- ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಹೆಚ್ಚಾದ್ದರಿಂದ ಶಾಲಾ-ಕಾಲೇಜುಗಳಿಗೆ ಇನ್ನೂ ಎರಡು ದಿನ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.  ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ತೀರ್ಪು ಪ್ರಕಟಗೊಂಡ ನಂತರ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಗಳು ಹೆಚ್ಚಾಗಿದ್ದು, ಮುಂಜಾಗೃತಾ ಕ್ರವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ನಾಳೆ ಮತ್ತು ನಾಡಿದ್ದು ಕೂಡ ಮಂಡ್ಯ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಮುಂದುವರಿಸಲಾಗಿದೆ ಎಂದು ಅವರು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin