ಮಂಡ್ಯ ಹೋರಾಟ ತೀವ್ರ ಬೀದಿಗಿಳಿದ ವಕೀಲರು, ಪತ್ರಕರ್ತರು

ಈ ಸುದ್ದಿಯನ್ನು ಶೇರ್ ಮಾಡಿ

 

protest
ಮಂಡ್ಯ, ಸೆ.23- ಜಿಲ್ಲೆಯಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದು, ನಾನಾ ಕಡೆಗಳಲ್ಲಿ ರಸ್ತೆ ತಡೆ, ಧರಣಿ, ಪ್ರತಿಭಟನೆಗಳು ಇಂದೂ ಕೂಡ ಮುಂದುವರೆದಿದೆ.ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿ ಮತ್ತು ಸರ್ಕಾರಕ್ಕೆ ಬೆಂಬಲ ಸೂಚಿಸಿ ನ್ಯಾಯಾಲಯದ ಕಾರ್ಯಕಲಾಪ ಬಹಿಷ್ಕರಿಸಿ ಇಂದು ಜಿಲ್ಲಾ ವಕೀಲರ ಸಂಘ ಬಸವರಾಜ್ ಅವರ ನೇತೃತ್ವದಲ್ಲಿ ಮಂಡ್ಯದಿಂದ ಬೆಂಗಳೂರಿಗೆ ರ್ಯಾಲಿ ಹಮ್ಮಿಕೊಂಡಿತ್ತು.ಆದರೆ ಬೆಳಗ್ಗೆ ಇದಕ್ಕೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಕೆಲ ಕಾಲ ಮಾತಿನ ಚಕಮಕಿ ನಡೆಯಿತು.
ಕಾವೇರಿ ವಿಷಯದಲ್ಲಿ ಯಾವುದೇ ರಾಜಕೀಯ ಬೇಡ. ನ್ಯಾಯಾಂಗ ನಿಂದನೆ ಭಯ ಪಡುವುದು ಬೇಡ. ಕನ್ನಂಬಾಡಿ ಅಣೆಕಟ್ಟಿನಿಂದ ಒಂದು ಹನಿ ನೀರು ಕೂಡ ತಮಿಳುನಾಡಿಗೆ ಬಿಡಬೇಡಿ ಎಂದು ಬಸವರಾಜ್ ಮನವಿ ಮಾಡಿದರು.ಸೆಪ್ಟೆಂಬರ್ 27ರವರೆಗೂ ನಾವು ನ್ಯಾಯಾಲಯದ ಕಾರ್ಯಕಲಾಪ ಬಹಿಷ್ಕರಿಸಿದ್ದೇವೆ ಎಂದು ಇದೇ ವೇಳೆ ತಿಳಿಸಿದ್ದಾರೆ. ಪೊಲೀಸರು ಬೆಂಗಳೂರಿಗೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ನೂರಾರು ಮಂದಿ ವಕೀಲರು ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು.
ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾ.ಪಂ. ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಕಾವೇರಿ ವಿಷಯದಲ್ಲಿ ಆಗುತ್ತಿರುವ ಅನ್ಯಾಯ ಖಂಡಿಸಿ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಎಲ್ಲರೂ ಒಗ್ಗೂಡಿ ಉಪವಿಭಾಗಾಧಿಕಾರಿಗಳನ್ನು ಭೇಟಿ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ತೀರ್ಮಾನಿಸಿದ್ದಾರೆ.ಇನ್ನು ಸಂಜಯ್‍ವೃತ್ತದಲ್ಲಿ ಜಿ.ಮಾದೇಗೌಡ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಮುಂದುವರೆದಿದ್ದು, ನೂರಾರು ರೈತರು, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಇಂದು ಸಾಥ್ ನೀಡಿದ್ದಾರೆ.ಇದೇ ವೇಳೆ ಮಂಡ್ಯದ ಪತ್ರಕರ್ತರು ಕೂಡ ಪ್ರತಿಭಟನೆ ನಡೆಸಿ ರೈತರಿಗೆ ಬೆಂಬಲ ವ್ಯಕ್ತಪಡಿಸಿದರು.

► Follow us on –  Facebook / Twitter  / Google+

 

 

Facebook Comments

Sri Raghav

Admin