ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಈ ಸುದ್ದಿಯನ್ನು ಶೇರ್ ಮಾಡಿ

hiri-saavi
ಹಿರೀಸಾವೆ, ಆ.24- ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರನ್ನು ಶಿಕ್ಷಕರು ಮತ್ತು ಪೋಷಕರು ಪ್ರೋತ್ಸಾಹಿಸಬೇಕು ಎಂದು ಗ್ರಾಪಂ ಸದಸ್ಯ ಎಚ್.ಕೆ. ವೆಂಕಟೇಶ್ ಹೇಳಿದರು. ಇಲ್ಲಿನ ನರೇಂದ್ರ ವಿದ್ಯಾಸಂಸ್ಥೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳನ್ನು ಪ್ರತಿವರ್ಷ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಾಡಬೇಕು. ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರತರುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಮಕ್ಕಳಲ್ಲಿರುವ ಪ್ರತಿಭೆಗಳನ್ನು ಪ್ರಾರಂಭದಲ್ಲಿಯೇ ಚಿವುಟಬಾರದು. ಮಕ್ಕಳ ಮೇಲೆ ಯಾವುದೇ ಒತ್ತಡ ಹೇರಬಾರದು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.
ಮಕ್ಕಳು ಯಾವುದೇ ವಿಷಯಕ್ಕೆ ಸಂಬಂಧಪಟ್ಟಂತಹ ಚಿತ್ರಕಲೆ, ನಾಟಕ, ಹಾಡುಗಾರಿಕೆ, ನೃತ್ಯ ಇಂತಹ ವಿಷಯಗಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಗ್ರಾಪಂ ಸದಸ್ಯೆ ಕೋಮಲಾ ನರಸಿಂಹಮೂರ್ತಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು ಉನ್ನತ ಹುದ್ದೆಯಲ್ಲಿ ಇದ್ದಾರೆ ಎಂದು ಹಲವು ಉದಾಹರಣೆಗಳೊಂದಿಗೆ ವಿವರಿಸಿದರು.  ಶಾಲೆ ಅಧ್ಯಕ್ಷ ಎಚ್.ಜಿ.ವಿಷಕಂಠೇಗೌಡ, ಗ್ರಾಪಂ ಸದಸ್ಯರಾದ ಪುಟ್ಟರಾಜು, ಹೊನ್ನೇನಹಳ್ಳಿ ಬಾಬು, ಸುಜತಮಂಜನಾಥ್, ತುಂಗಲಕ್ಷ್ಮಿ ಮಂಜಣ್ಣ, ಪುಷ್ಪಲತಾ ಗಣೇಶ್, ಗಿರಿಜಾ ಪರಮೇಶ್, ಜಯಲಕ್ಷ್ಮಿರಮೇಶ್, ದಿಡಗ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ನೀಲಸಿದ್ದು, ಹಿರೀಸಾವೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಪ್ರಕಾಶ್, ಗೋಪಾಲಶೆಟ್ಟರು, ಮಂಜೇಗೌಡ ವೇದಿಕೆಯಲ್ಲಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin