ಮಗುವಿನೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿಂತಾಮಣಿ, ಡಿ.7-ವಿವಾಹಿತ ಮಹಿಳೆಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ 3ವರ್ಷದ ಮಗುವಿನೊಂದಿಗೆ ಗ್ರಾಮದ ಹೊರವಲಯದಲ್ಲಿರುವ ಕೃಷಿಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚಾರ್ಲಹಳ್ಳಿಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗವೇಣಿ (30) ಮತ್ತು ಆಕೆಯ ಮೂರು ವರ್ಷದ ಮಗಳು ನಿಹಾರಿಕ ಮೃತಪಟ್ಟಿದ್ದಾರೆ.ತಾಲೂಕಿನ ಕೋರ್ಲಪತ್ರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಚ್ಚಗಾನಹಳ್ಳಿ ಗ್ರಾಮದ ನಿವಾಸಿ ನಾರಾಯಣಪ್ಪನವರ ಮಗಳಾದ ನಾಗವೇಣಿ ಕಟ್ಟಿಗೇನಹಳ್ಳಿ ಗ್ರಾಮದ ವೆಂಕಟರವಣ ಎಂಬುವರ ಜೊತೆ ಕಳೆದ ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದು ಆಕೆಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿತ್ತು.

ಇತ್ತೀಚೆಗೆ ಪತ್ನಿ ನಾಗವೇಣಿಯ ನಡತೆ ಸರಿಯಿಲ್ಲವೆಂದು ದೂರಿ ಗಂಡ ವೆಂಕಟರವಣ ಆಕೆಯ ಪೋಷಕರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಖುದ್ದು ಪೋಷಕರೇ ಅಳಿಯನ ಮನೆಗೆ ಕಳೆದರಡು ದಿನಗಳ ಹಿಂದೆ ಬಂದು ಮಗಳಿಗೆ ಬುದ್ದಿವಾದ ಹೇಳಿದಲ್ಲದೆ ಮಗಳ ಮನೆಯಲ್ಲಿಯೇ ಇದ್ದಾರೆ. ಇದರಿಂದ ಜಿಗುಪ್ಸೆಗೊಂಡಿದ್ದ ನಾಗವೇಣಿ ನಿನ್ನೆ ಮಗಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳ ತಂದೆ ನಾರಾಯಣಪ್ಪ ನೀಡಿದ ದೂರಿನ ಮೇಲೆ ಕೆಂಚಾರ್ಲಹಳ್ಳಿ ಠಾಣೆಯ ಪಿಎಸ್‍ಐ ಅನಿಲ್‍ಕುಮಾರ್ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin