ಮಠಗಳ ಮೇಲೆ ಸರ್ಕಾರ ಕಣ್ಣು ಹಾಕಿದರೆ ಬೀದಿಗಿಳಿದು ಹೋರಾಟ : ಶೆಟ್ಟರ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

JagadishSession--01
ಬೆಂಗಳೂರು,ಫೆ.8-ಮಠಗಳನ್ನು ಸುಪರ್ದಿಗೆ ತೆಗೆದುಕೊಳ್ಳುವ ಸಂಬಂಧ ಹೊರಡಿಸಿರುವ ಸುತ್ತೋಲೆಯನ್ನು ಮುಜರಾಯಿ ಇಲಾಖೆ ತಕ್ಷಣವೇ ವಾಪಸ್ ಪಡೆಯಬೇಕು. ಇಲ್ಲವಾದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಿನಿಂದ ಸಂಜೆಯವರೆಗೆ ತಾನೂ ಹಿಂದೂ ಎಂದು ಹೇಳುವ ಸಿದ್ದರಾಮಯ್ಯ ಅಲ್ಪ ಸಂಖ್ಯಾತರ ತುಷ್ಟೀಕರಣ ಮಾಡುತ್ತಿದ್ದಾರೆ. ಮಠಗಳನ್ನು ನಿಯಂತ್ರಣಕ್ಕೆ ಪಡೆಯುವ ಸರ್ಕಾರದ ಕ್ರಮ ಹಿಂದೂ ಮಠಾಧೀಶರಲ್ಲಿ ಆತಂಕ ತಂದಿದೆ.
ಎಲ್ಲಾ ಮಠಾಧೀಶರು, ಭಕ್ತಾದಿಗಳು ಬೀದಿಗೆ ಬೀಳುವ ಸಾದ್ಯತೆ ಇದೆ. ಸರ್ಕಾರ ತಕ್ಷಣ ಸುತ್ತೋಲೆ ವಾಪಸ್ ಪಡೆಯಬೇಕು. ಸರ್ಕಾರಕ್ಕೆ ಸದುದ್ದೇಶವಿದ್ದರೆ. ಹಿಂದೂ, ಮುಸ್ಲಿಂ, ಕ್ರೈಸ್ತ ಧಾರ್ಮಿಕ ಕೇಂದ್ರಗಳನ್ನು ಧಾರ್ಮಿಕ ದತ್ತಿ ವ್ಯಾಪ್ತಿಗೆ ತರಬೇಕೆಂದು ಸರ್ಕಾರಕ್ಕೆ ಸವಾಲೆಸೆದರು.

ಮುಜರಾಯಿ ಸುತ್ತೋಲೆ ಬಗ್ಗೆ ಪರಿಷತ್‍ನ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ. 2006ರಲ್ಲಿನ ಕೋರ್ಟ್ ನಿರ್ದೇಶನಕ್ಕೆ ಈವರೆಗೆ ಯಾಕೆ ಸರ್ಕಾರ ಸುಮ್ಮನಿತ್ತು. ಇದನ್ನು ನೋಡಿದರೆ ಸರ್ಕಾರದ ಉದ್ದೇಶ ಸ್ಪಷ್ಟವಾಗಿದೆ ಎಂದು ಟೀಕಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin