ಮತದಾನಕ್ಕೆ ಹೆಸರು ನೊಂದಾಯಿಸಿಕೊಳ್ಳುವಂತೆ 18 ವರ್ಷ ಮೇಲ್ಪಟ್ಟವರಿಗೆ ಪ್ರಧಾನಿ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

modi-point

ನವದೆಹಲಿ, ಜ.25-ಇಂದು ರಾಷ್ಟ್ರೀಯ ಮತದಾರರ ದಿನ. ಈ ಸಂದರ್ಭದಲ್ಲಿ 18 ವರ್ಷದ ಮೇಲ್ಪಟ್ಟವರೆಲ್ಲರೂ ಮತದಾರರಾಗಿ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳುವಂತೆ ಹಾಗೂ ಪ್ರಜಾಪ್ರಭುತ್ವದ ದ್ಯೋತಕವಾದ ಚುನಾವಣೆಗಳಲ್ಲಿ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ನವ ಯುವಜನತೆಗೆ ಮನವಿ ಮಾಡಿದ್ದಾರೆ. ನಿಮ್ಮೆಲ್ಲರಿಗೂ ರಾಷ್ಟ್ರೀಯ ಮತದಾರರ ದಿನಾಚರಣೆ ಶುಭಾಶಯಗಳು. ನಾವು ಚುನಾವಣಾ ಆಯೋಗವನ್ನು ಅಭಿನಂದಿಸುತ್ತೇವೆ ಮತ್ತು ನಮ್ಮ ದೇಶದ ಜನತಂತ್ರ ವ್ಯವಸ್ಥೆಯಲ್ಲಿ ಆಯೋಗದ ಸಿಬ್ಬಂದಿ ವಹಿಸುವ ಬಹು ಮುಖ್ಯ ಪಾತ್ರವನ್ನು ನಾವು ಗೌರವಿಸುತ್ತೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

18 ವರ್ಷ ಪೂರ್ಣಗೊಂಡಾಗ ಪ್ರತಿಯೊಬ್ಬರೂ ಮತದಾರರಾಗಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳಬೇಕು. ಹಾಗೂ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹಕ್ಕುಗಳನ್ನು ಚಲಾಯಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ  ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳ ಹಿನ್ನೆಲೆಯಲ್ಲಿ ಮೋದಿ ಹೇಳಿಕೆ ಮಹತ್ವ ಪಡೆದುಕೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin