ಮತದಾರರಿಗೆ ಹಂಚಲು ತಂದಿದ್ದ ಲಕ್ಷಾಂತರ ಮೌಲ್ಯದ ಹೊಲಿಗೆ ಯಂತ್ರ ವಶ

ಈ ಸುದ್ದಿಯನ್ನು ಶೇರ್ ಮಾಡಿ

Sttching--1

ಬೆಂಗಳೂರು, ಏ.3- ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಮತದಾರರಿಗೆ ಹಂಚಲು ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಹೊಲಿಗೆ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಮಂಡೂರು ಬಳಿಯ ಮನೆಯೊಂದರಲ್ಲಿ ಅಕ್ರಮವಾಗಿ ಹೊಲಿಗೆ ಯಂತ್ರ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಪಡೆದ ಚುನಾವಣಾಧಿಕಾರಿಗಳ ತಂಡ ಬೆಳಗ್ಗೆ 5 ಗಂಟೆಗೆ ಮಿಂಚಿನ ಕಾರ್ಯಾಚರಣೆ ನಡೆಸಿ ನೂರಾರು ಹೊಲಿಗೆ ಯಂತ್ರ ಮತ್ತು ಸ್ಟ್ಯಾಂಡ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಜಕೀಯ ಪಕ್ಷವೊಂದಕ್ಕೆ ಸೇರಿದ ವ್ಯಕ್ತಿಯೊಬ್ಬರು ಮಂಡೂರಿನಲ್ಲಿ ಹೊಲಿಗೆ ಯಂತ್ರ ಸಂಗ್ರಹಿಸಿಟ್ಟಿದ್ದಾರೆ ಎಂಬ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ದಯಾನಂದ್ ಅವರ ಸೂಚನೆಯಂತೆ ಸ್ಥಳೀಯ ಕಂದಾಯ ಅಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳು ಈ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.

Sttching--4

Sttching--3

Sttching--2

Facebook Comments

Sri Raghav

Admin