ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರ್ಪಡೆ : ಚುನಾವಣಾಧಿಕಾರಿಯಿಂದ ತನಿಖೆ

ಈ ಸುದ್ದಿಯನ್ನು ಶೇರ್ ಮಾಡಿ

Fake-Voters--01

ತುಮಕೂರು, ಸೆ.26- ನಗರದ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಮತದಾರರ ಸೇರ್ಪಡೆ ವಿಚಾರವಾಗಿ ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಪಿ.ಮೋಹನ್ ಖುದ್ದು ತನಿಖೆ ತೀವ್ರಗೊಳಿಸಿದ್ದಾರೆ.  ಇತ್ತೀಚಿನ ಕೆಲವು ತಿಂಗಳಿನಿಂದ ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ ಎಂಬ ವಿಚಾರ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಹಲವು ಬಾರಿ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಆದೇಶ ನೀಡಿತ್ತು. ಈ ಸಂಬಂಧ ಉಪವಿಭಾಗಾಧಿಕಾರಿಗಳಿಗೆ ತನಿಖೆ ಮಾಡಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚಿಸಿದ್ದರು.

ತದನಂತರ ಸಲ್ಲಿಸಿದ ವರದಿ ಸರಿಯಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮೋಹನ್ ಅವರೇ ಖುದ್ದು ತನಿಖೆಗೆ ಮುಂದಾಗಿದ್ದು, ಕಳೆದ ಐದು ವರ್ಷದಿಂದ 57,286 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಈ ಮತದಾರರ ವಿವರ ಪರಿಶೀಲಿಸುತ್ತಿದ್ದು, ಜಿಲ್ಲೆಯ 10 ತಾಲೂಕಿನ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿಕೊಂಡಿರುವುದಲ್ಲದೆ ರಾಜ್ಯ ಚುನಾವಣಾ ಆಯೋಗ ಕೂಡ ಒಬ್ಬ ಚುನಾವಣಾಧಿಕಾರಿಯನ್ನು ನೇಮಿಸಿದೆ. ಈ ಹಿಂದೆ ನೇಮಿಸಿದ ಉಪವಿಭಾಗಾಧಿಕಾರಿ ತಬ್ಸಮಾ ಜಹೇರಾ ಅವರನ್ನು ತನಿಖೆಯಿಂದ ಕೈಬಿಟ್ಟು ತನಿಖೆ ನಡೆಸಲಾಗುತ್ತಿದೆ. ರಾಜ್ಯದ ಇತಿಹಾಸದಲ್ಲಿಯೇ ಈ ರೀತಿ ತನಿಖೆ ನಡೆಸುತ್ತಿರುವುದು ಇದೇ ಮೊದಲು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin