ಮತ್ತೊಮ್ಮೆ ಬಂದ್ : ಸೆ.9 ರಂದು ಕಾವೇರಿಗಾಗಿ ಕರ್ನಾಟಕ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

Bandh

ಬೆಂಗಳೂರು ಸೆ.06: ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂದು, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಮಂಡ್ಯ ಜಿಲ್ಲೆಯಲ್ಲಿ ಬಂದ್ ನಡೆಸಲಾಗಿದೆ. ಅಲ್ಲದೇ, ಸೆಪ್ಟಂಬರ್ 9 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಲ್ಲದೆ, ಜಲಾಶಯ ಬರಿದಾಗಿದೆ. ಕುಡಿಯುವ ನೀರಿಗೂ ತೊಂದರೆಯಾಗಿದ್ದು, ಸುಪ್ರೀಂ ಕೋರ್ಟ್ ವಾಸ್ತವ ಸ್ಥಿತಿ ಅರಿಯದೇ ತಮಿಳುನಾಡಿನ ಪರವಾಗಿ ತೀರ್ಪು ನೀಡಿದೆ ಎಂದು ಕನ್ನಡ ಸಂಘಟನೆಗಳ ಪರವಾಗಿ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇ, ಪದೇ ಅನ್ಯಾಯವಾಗುತ್ತಿದೆ. ಪದೇ, ಪದೇ ಬಂದ್ ಮಾಡುವ ಹುಚ್ಚುತನವಿಲ್ಲ. ಕನ್ನಡಿಗರ ಶಕ್ತಿಯನ್ನು ತೋರಿಸುವ ಉದ್ದೇಶದಿಂದ ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮರುಪರಿಶೀಲನೆಗೆ ಸರ್ಕಾರ ಅರ್ಜಿ ಸಲ್ಲಿಸಬೇಕು. ಸೆಪ್ಟಂಬರ್ 9 ರಂದು ನಡೆಯುವ ಕರ್ನಾಟಕ ಬಂದ್ ಗೆ ಜನತೆ ಬೆಂಬಲ ನೀಡಬೇಕೆಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

► Follow us on –  Facebook / Twitter  / Google+

 

Facebook Comments

Sri Raghav

Admin