ಮದುವೆ ದಿಬ್ಬಣದ ಲಾರಿಗೆ ಮತ್ತೊಂದು ಲಾರಿ ಅಪ್ಪಳಿಸಿ ಮದುಮಗ ಸೇರಿ ನಾಲ್ವರ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

Dead--Accident
ಹೈದರಾಬಾದ್, ಮೇ 17-ಲಾರಿಗಳ ನಡುವೆ ಡಿಕ್ಕಿಯಾಗಿ ಮದುಮಗ ಸೇರಿದಂತೆ ನಾಲ್ವರು ಮೃತಪಟ್ಟಿರುವ ಭೀಕರ ಘಟನೆ ಇಂದು ಮುಂಜಾನೆ ತೆಲಂಗಾಣದ ಸೂರ್ಯಪೇಟೆಯ ಮೋತಾ ಗ್ರಾಮದ ಬಳಿ ಸಂಭವಿಸಿದೆ. ಈ ಘಟನೆಯಲ್ಲಿ 10 ಮಂದಿಗೆ ತೀವ್ರ ಗಾಯಗಳಾಗಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ.
ಕಮ್ಮಂ ಜಿಲ್ಲೆಯಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ಮದುವೆ ದಿಬ್ಬಣದ ಲಾರಿ ಮೋತಾ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಇನ್ನೊಂದು ಲಾರಿಗೆ ಅಪ್ಪಳಿಸಿತು. ಈ ದುರಂತದಲ್ಲಿ ಮದುಮಗ ಶೇಷಸಾಯಿನಾಥ್ ಸೇರಿದಂತೆ ನಾಲ್ವರು ಮೃತಪಟ್ಟರು. ಇವರೆಲ್ಲರೂ ಹೈದರಾಬಾದ್‍ನ ಕೂಕಟಪಳ್ಳಿಯವರು. ದುರ್ಘಟನೆಯಲ್ಲಿ ಗಾಯಗೊಂಡ 10 ಮಂದಿಯನ್ನು ಸೂರ್ಯಪೇಟೆ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.  ಅಪಘಾತ ಸಂಭವಿಸಿದ ಸ್ಥಳಕ್ಕೆ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin