ಮದ್ದೂರು ಬಳಿ ಜೆಡಿಎಸ್ ಕಾರ್ಯಕರ್ತನ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Murder-Blood

ಮದ್ದೂರು, ನ.29- ಕಾರಿನಲ್ಲಿ ಬಂದ ದುಷ್ಕರ್ಮಿಗಳು ತಾಲೂಕಿನ ಕೊಪ್ಪ ಬಳಿ ಜೆಡಿಎಸ್ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೊಲೆಗೀಡಾದ ಕಾರ್ಯಕರ್ತನನ್ನು ಸಂತೋಷ್‍ಕುಮಾರ್ (27) ಎಂದು ಗುರುತಿಸಲಾಗಿದೆ. ಕೊಪ್ಪ ಬಳಿಯ ಕೌಡ್ಲೆ ಗ್ರಾಮದ ನಿವಾಸಿ ಸಂತೋಷ್‍ಕುಮಾರ್ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ. ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಕೊಲೆ ಏಕೆ ನಡೆದಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

Facebook Comments

Sri Raghav

Admin