ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

chintamani

ಚಿಂತಾಮಣಿ, ಆ.16-ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಪಲ್ಲಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೆಂಗಳೂರಿನ ಟಿ.ದಾಸರಹಳ್ಳಿಯ ನಾರಾಯಣಸ್ವಾಮಿ (56) ಎಂದು ಗುರುತಿಸಲಾಗಿದೆ. ಲಾರಿ ಮಾಲೀಕ ಮತ್ತು ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾರಾಯಣಸ್ವಾಮಿ ಇತ್ತೀಚೆಗೆ ಮಧುಮೇಹ ಕಾಯಿಲೆಯಿಂದ ಚಿಂತೆಗೀಡಾಗಿದ್ದು ಆ.12 ರಂದು ತುಮಕೂರಿಗೆ ಹೋಗುವುದಾಗಿ ಹೇಳಿ ಹೋದವರು ಮನೆಗೆ ವಾಪಸ್ಸು ಬಂದಿರಲಿಲ್ಲ.ಕೋನಪಲ್ಲಿ ಗ್ರಾಮದ ಜಮೀನುವೊಂದರಲ್ಲಿ ನೇಣು ಹಾಕಿಕೊಂಡಿರುವುದು ತಿಳಿದುಬಂದಿದೆ.
ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin