ಮಧ್ಯಪ್ರದೇಶದಲ್ಲಿ ಟ್ರ್ಯಾಕ್ಟರೊಂದು ಪಲ್ಟಿಯಾಗಿ 11 ಮಂದಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Tractor--01

ಇಂದೋರ್(ಮಧ್ಯಪ್ರದೇಶ), ಮೇ 26-ಟ್ರ್ಯಾಕ್ಟರೊಂದು ಪಲ್ಟಿಯಾಗಿ ಮಕ್ಕಳು ಮತ್ತು ಮಹಿಳೆಯರೂ ಸೇರಿದಂತೆ 11 ಮಂದಿ ಮೃತಪಟ್ಟ ಘಟನೆ ಇಲ್ಲಿನ ನೀಮುಚ್ ಜಿಲ್ಲೆಯಲ್ಲಿ ಸಂಭವಿಸಿದೆ. ರಾಜಸ್ತಾನದ ಸನ್ವಾರಿಯಾ ಸೇತ್ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ತಮ್ಮ ಸ್ವಗ್ರಾಮವಾದ ಕಜಾರಿಯಾಗೆ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್‍ನ ಒಂದು ಚಕ್ರ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.



ಈ ಟ್ರ್ಯಾಕ್ಟರ್‍ನಲ್ಲಿ ಸುಮಾರು 35 ಮಂದಿ ಇದ್ದರು. ಅಪಘಾತದ ತೀವ್ರತೆಗೆ 11 ಮಂದಿ ತಲೆಗೆ ಭಾರಿ ಪೆಟ್ಟಾಗಿ ಸ್ಥಳದಲ್ಲೇ ಸಾವಿಗೀಡಾಡರು. ಮೃತರಲ್ಲಿ ಆರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ಗಾಯಗೊಂಡ 24 ಮಂದಿಯಲ್ಲಿ ಐವರ ಸ್ಥಿತಿ ಶೋಚನೀಯವಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin