ಮನೆಗೆ ನುಗ್ಗಿ ಇಬ್ಬರು ಬಾಲಕಿಯರ ಮೇಲೆ ಆಸಿಡ್ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Acid-attack

ಬರೇಲಿ, ಆ.23 – ಮನೆಯೊಂದಕ್ಕೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಇಬ್ಬರು ಬಾಲಕಿಯರ ಮೇಲೆ ಆಸಿಡ್ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‍ಗಂಜ್‍ನ ತಾಂಡಾವೊಂದರಲ್ಲಿ ನಡೆದಿದೆ. ಈ ದಾಳಿಯಲ್ಲಿ 15 ಮತ್ತು 17 ವಯಸ್ಸಿನ ಬಾಲಕಿಯರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಮುಖ ಮತ್ತು ಕಣ್ಣುಗಳಿಗೆ ಹಾನಿಯಾಗಿದೆ. ಬರೇಲಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂತ್ರಸ್ತೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ಜೋಗೀಂದರ್ ಕುಮಾರ್ ಹೇಳಿದ್ದಾರೆ.

Facebook Comments

Sri Raghav

Admin