ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

bike-burn

ತುಮಕೂರು, ಮೇ 8-ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಇಟ್ಟು ಪರಾರಿಯಾಗುತ್ತಿರುವ ಘಟನೆಗಳು ಮತ್ತೆ ಮರುಕಳಿಸಿವೆ.  ಇಂದು ಬೆಳಗಿನ ಜಾವ ಜಯನಗರದ ನಿವಾಸಿ ರಾಜಣ್ಣ ಎಂಬುವರ ಹೋಂಡಾ ಆ್ಯಕ್ಟೀವಾ ದ್ವಿಚಕ್ರ ವಾಹನಕ್ಕೆ ದುಷ್ಕರ್ಮಿಗಳು ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.






ಕಳೆದ ಕೆಲವು ದಿನಗಳ ಹಿಂದೆ ನಗರದಲ್ಲಿ ಕಾರು, ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಈ ಸಂಬಂಧ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಮಟ್ಟ ಹಾಕಿದ್ದರು.  ಮತ್ತೆ ನಗರದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಾಗಾಗಿ ವಾಹನ ಮಾಲೀಕರು ತೀವ್ರ ಆತಂಕಕ್ಕೀಡಾಗಿದ್ದಾರೆ.  ಈ ಸಂಬಂಧ ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin