ಮನೋಹರ್ ತಹಸೀಲ್ದಾರ್ ಟಿಕೆಟ್ ನೀಡದಿರುವುದಕ್ಕೆ ಕಾರ್ಯಕರ್ತರ ತೀವ್ರ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

Manohar-Tahsheeldar-01

ಹಾವೇರಿ, ಏ.16- ಜಿಲ್ಲೆಯ ಹಾನಗಲ್ ಮತಕ್ಷೇತ್ರದಿಂದ ಮಾಜಿ ಸಚಿವ, ಹಿರಿಯ ಕಾಂಗ್ರೆಸಿಗ ಮನೋಹರ್ ತಹಸೀಲ್ದಾರ್ ಅವರಿಗೆ ಟಿಕೆಟ್ ನೀಡದೆ ಇರುವುದಕ್ಕೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಇಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೆಳಗ್ಗೆ ನೂರಾರು ಕಾರ್ಯಕರ್ತರು ನಾಯಕರ ವಿರುದ್ಧ ಘೋಷಣೆ ಕೂಗಿ ಟಿಕೆಟ್ ನೀಡಲೇಬೇಕೆಂದು ಒತ್ತಾಯಿಸಿದರು. ಕ್ಷೇತ್ರಕ್ಕೆ ಸಂಬಂಧವಿಲ್ಲದ ಹುಬ್ಬಳ್ಳಿಯ ಶ್ರೀನಿವಾಸ್ ಮಾನೆ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ಖಂಡನೀಯ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.  ತಹಸೀಲ್ದಾರ್ ಅವರು ಕಳೆದ ಹಲವಾರು ವರ್ಷಗಳಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಎಲ್ಲರೊಂದಿಗೆ ಬೆರೆಯುವ ವ್ಯಕ್ತಿ ಇವರಾಗಿದ್ದಾರೆ ಎಂದ ಕಾರ್ಯಕರ್ತರು ಟಿಕೆಟ್ ನೀಡಲೇಬೇಕು. ಇಲ್ಲವಾದರೆ ತಕ್ಕಪಾಠ ಕಲಿಸಲಾಗುವುದೆಂದು ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.

Facebook Comments

Sri Raghav

Admin