ಮನೋಹರ್ ಪರಿಕ್ಕರ್ ಹೇಳಿಕೆಗೆ ಕಾಂಗ್ರೆಸ್’ನಿಂದ ಕಟು ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

Manohar

ನವದೆಹಲಿ, ಅ.13-ಸರ್ಜಿಕಲ್ ದಾಳಿಯ ಕುರಿತು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. ಸರ್ಜಿಕಲ್ ದಾಳಿ ಬಗ್ಗೆ ಬಿಜೆಪಿ ನಾಯಕರು ಇಬ್ಬಗೆ ನೀತಿ ಅನುಸರಿಸುತ್ತಿದ್ದಾರೆ ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ, ಪ್ರಧಾನಿ ನರೇಂದ್ರ ಮೋದಿ, ಸಂಪುಟ ಸಹೋದ್ಯೋಗಿಗಳಿಗೆ ಎಚ್ಚರಿಸಿದ ಬಳಿಕವೂ ಸರ್ಜಿಕಲ್ ದಾಳಿಯ ಲಾಭವನ್ನು ಪಡೆಯಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೊದಿ, ಬಿಜೆಪಿ ಅಧ್ಯಕ್ಪ ಹಾಗೂ ರಕ್ಪಣಾ ಸಚಿವ ಮನೋಹರ್ ಪಾರಿಕ್ಕರ್ ಬೇರೆ ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಹೇಳಿರುವುದರ ವಿರುದ್ಧವಾಗಿ ಅವರ ಸಹೋದ್ಯೋಗಿಗಳು ನಡೆದುಕೊಳ್ಳುತ್ತಿದ್ದಾರೆ, ಎಂದು ಆನಂದ್ ಶರ್ಮಾ ಹೇಳಿದ್ದಾರೆ.

ಕಳೆದ 29 ವರ್ಷಗಳಲ್ಲಿ ಮೊದಲ ಬಾರಿಗೆ ಸೇನೆಗೆ ತನ್ನ ಶಕ್ತಿಯ ಅರಿವಾಗುವಂತೆ ಪ್ರಧಾನಿ ಮೋದಿ ಮಾಡಿದ್ದಾರೆಂಬ ಪಾರಿಕ್ಕರ್ ಹೇಳಿಕೆಯು, ಸೇನೆಗೆ ಹಾಗೂ ಯೋಧರ ತ್ಯಾಗ-ಬಲಿದಾನಗಳಿಗೆ ಮಾಡಿರುವ ದೊಡ್ಡ ಅವಮಾನವಾಗಿದೆ ಎಂದು ಆನಂದ್ ಶರ್ಮಾ ಕಿಡಿಕಾರಿದ್ದಾರೆ. ಸರ್ಜಿಕಲ್ ದಾಳಿಯ ಸಂಪೂರ್ಣ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ ಜೊತೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ ಎಂದು ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ನಿನ್ನೆ ಹೇಳಿಕೆ ನೀಡಿದ್ದರು.  ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿಯ ಬಹುಪಾಲು ಯಶಸ್ಸು ಮೋದಿಗೆ ಸಲ್ಲಬೇಕು. ಇಂತದ್ದೊಂದು ಪ್ರಮುಖ ನಿರ್ಧಾರ ತೆಗೆದುಕೊಂಡ ಪ್ರಧಾನಿಯವರ ನಡೆ ಶ್ಲಾಘನೀಯ. ಜನರು ಕೂಡಾ ಸಂತುಷ್ಟರಾಗಿದ್ದಾರೆ. ದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸುವವರು ಸಹ ಈ ಯಶಸ್ಸನ್ನು ಮೋದಿ ಜೊತೆ ಹಂಚಿಕೊಳ್ಳಬಹುದು ಎಂದು ಪಾರಿಕ್ಕರ್ ಕುಟುಕಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin