ಮರಣೋತ್ತರ ಪರೀಕ್ಷೆಗೆ ರುದ್ರೇಶ್ ಕುಟುಂಬದವರ ನಿರಾಕರಣೆ

ಈ ಸುದ್ದಿಯನ್ನು ಶೇರ್ ಮಾಡಿ

Rudresh-02

ಬೆಂಗಳೂರು,ಅ.17-ನಿನ್ನೆ ಶಿವಾಜಿನಗರದಲ್ಲಿ ಕೊಲೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಅವರ ಮರಣೋ ತ್ತರ ಪರೀಕ್ಷೆಗೆ ಅವರ ಕುಟುಂಬದವರು ಒಪ್ಪುತ್ತಿಲ್ಲ. ಆರೋಪಿಗಳನ್ನು ಬಂಧಿಸುವವರೆಗೂ ನಾವು ಅನುಮತಿ ಪತ್ರಕ್ಕೆ ಸಹಿ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.  ಒಂದೆಡೆ ಶಿವಾಜಿನಗರದ ವಿಕ್ಟೋರಿಯಾ ಆಸ್ಪತ್ರೆ ಮುಂದೆ ಆರ್‍ಎಸ್‍ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಅವರ ಕುಟುಂಬದವರು ಕೊಲೆಗಾರರನ್ನು ಬಂಧಿಸುವವರೆಗೆ ಮರಣೋತ್ತರ ಪರೀಕ್ಷೆಯ ಅನುಮತಿ ಪತ್ರಕ್ಕೆ ಸಹಿ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇವರ ಮನವೊಲಿಸುವ ಕಾರ್ಯವನ್ನು ಪೊಲೀಸರು ಮುಂದುವರೆಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin