ಮರಳು ಮಾಫಿಯಾಗೆ ಸಹಕಾರ : ಐವರು ಪಿಡಬ್ಯುಡಿ ಅಧಿಕಾರಿಗಳು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

arrested-Sand-Mafia-gang-1

ಚಿಕ್ಕಮಗಳೂರು, ಫೆ.28- ಮರಳು ಮಾಫಿಯಾಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಪಿಡಬ್ಯುಡಿಯ ಐವರು ಅಧಿಕಾರಿಗಳನ್ನು ಚಿಕ್ಕಮಗಳೂರು ಡಿಸಿಐಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಕಲಿ ಬಿಲ್ ಬಳಸಿ ಸುಮಾರು 10 ಕೋಟಿಗೂ ಹೆಚ್ಚು ಹಣ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು , 4,000 ಕ್ಕೂ ಹೆಚ್ಚು ನಕಲಿ ಪರ್ಮಿಟ್‍ಗಳನ್ನು ಬಳಸಿ ಮರಳನ್ನು ಸಾಗಿಸಲಾಗಿತ್ತು. ಆದರೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ದೂರುಗಳು ಕೇಳಿ ಬಂದಿದ್ದವು.

ಪಿಡಬ್ಲ್ಯುಡಿಯ ಕಾರ್ಯ ನಿರ್ವಹಣಾಧಿಕಾರಿ ಲೋಕೇಶಪ್ಪ , ಸಹಾಯಕ ಎಂಜಿನಿಯರ್ ಲೋಕೇಶ್, ಎಇ ಚಿರಂಜೀವಿ ಸೇರಿದಂತೆ ಐವರನ್ನು ಬಂಧಿಸಲಾಗಿದ್ದು , ಇನ್ನು ಹಲವರಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಮೂಲದ ಮರಳು ಮಾಫಿಯಾ ದಂಧೆಕೋರರು ಎಗ್ಗಿಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿತ್ತು. ಇಲ್ಲಿನ ಬಂಧಿತ ಅಧಿಕಾರಿಗಳು ಲಂಚ ಪಡೆದು ಸಹಿ ಹಾಗೂ ಮೊಹರು ಹಾಕಿ ಕಳುಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin