ಮಲ್ಲಘಟ್ಟ ಕೆರೆ ಜೀರ್ಣೋದ್ಧಾರದಲ್ಲಿ ಕಳಪೆ ಕಾಮಗಾರಿ

ಈ ಸುದ್ದಿಯನ್ನು ಶೇರ್ ಮಾಡಿ

TURVEKERE

ತುರುವೇಕೆರೆ, ಆ.31- ತಾಲೂಕಿನ ಮಲ್ಲಾಘಟ್ಟ ಕೆರೆ ಪುನರುಜ್ಜೀವನ ಮತ್ತು ಜೀರ್ಣೋದ್ಧಾರ ಕಾಮಗಾರಿಯನ್ನು ಗುತ್ತಿಗೆದಾರರು ಕಳಪೆಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಿ.ಎಸ್.ವಸಂತ್ ಕುಮಾರ್ ಆರೋಪಿಸಿದರು.ತಾಲೂಕಿನ ಮಲ್ಲಾಘಟ್ಟ ಕೆರೆ ಪುನರುಜ್ಜೀವನದ ಕಾಮಗಾರಿ ಪರಿಶೀಲಿಸಿ ಕಳಪೆಯಾಗಿರುವುದನ್ನು ಪ್ರದರ್ಶಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸುಮಾರು 500 ವರ್ಷಗಳ ಪುರಾತನ ಕೆರೆಯಾದ ಮಲ್ಲಾಘಟ್ಟ ಕೆರೆಯು ಪುರಾತನ ಯಾತ್ರಾಸ್ಥಳವಾಗಿದೆ. ಇಲ್ಲಿನ ಪ್ರಕೃತಿ ಸೌಂದರ್ಯ ವಿಶಿಷ್ಠವಾಗಿದೆ.

ಇಂತಹ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಸಂಕಲ್ಪಹೊಂದಿ ವಿಶ್ವ ಬ್ಯಾಂಕ್ ನೆರವಿನೊಂದಿಗೆ ಸುಮಾರ್ 785.17 ಲಕ್ಷ ವೆಚ್ಚದಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತದ ಮೂಲಕ ಕೆರೆ ಪುನರುಜ್ಜೀವನ ಮತ್ತು ಜೀರ್ಣೋದ್ಧಾರ ನಡೆಯುತ್ತಿದೆ. ಆದರೆ, ಇದರ ಕಾಮಗಾರಿ ಕಳಪೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸುಮಾರು ಎರಡು-ಮೂರು ತಿಂಗಳಿಂದ ಕೆಲಸ ಮಾಡುತ್ತಿದ್ದರೂ ಕಾವೇರಿ ನೀರಾವರಿ ನಿಗಮ ನಿಯಮಿತ ಎಂಜಿನಿಯರ್‍ಗಳು ಕಣ್ಮುಚ್ಚಿ ಕುಳಿತಿದ್ದಾರೆ. ಕಳಪೆ ಗುಣಮಟ್ಟದ ಮೆಟೀರಿಯಲ್ ಹಾಕಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಗುಣಮಟ್ಟದ ಕಾಮಗಾರಿ ನಿರ್ವಹಿಸದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin